ನವದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರನ್ನು ಸ್ವಾಗತಿಸಿದರು.
ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ಮೊದಲ ಬಾರಿಗೆ ಭಾರತಕ್ಕೆ ಬಂದಿರುವುದರಿಂದ ಮತ್ತು ಅದರಲ್ಲೂ ಜನವರಿ 26 ರಂದು ಗಣರಾಜ್ಯೋತ್ಸವದ ಪರೇಡ್ನಲ್ಲಿ ಭಾಗವಹಿಸಲು ಮುಖ್ಯ ಅತಿಥಿಯಾಗಿ ಅವರು ಆಗಮಿಸಿದ್ದಾರೆ..
ಈ ಸಂದರ್ಭ ಅವರನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ, ‘ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರಿಗೆ ಭಾರತಕ್ಕೆ ಆತ್ಮೀಯ ಸ್ವಾಗತ ನಮ್ಮ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾರತಕ್ಕೆ ನಿಮ್ಮ ಐತಿಹಾಸಿಕ ಭೇಟಿಯು ಎಲ್ಲಾ ಭಾರತೀಯರಿಗೆ ಅಪಾರ ಸಂತೋಷದ ವಿಷಯವಾಗಿದೆ’ ಎಂದು ಹೇಳಿದ್ದರು.
