ನವದೆಹಲಿ : ಗಣರಾಜ್ಯೋತ್ಸವದ ಮುನ್ನಾದಿನವಾದ ಇಂದು ಪದ್ಮ ಪುರಸ್ಕೃತರ ಹೆಸರನ್ನ ಪ್ರಕಟಿಸಲಾಗಿದೆ. 106 ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಕರ್ನಾಟಕದ 8 ಸಾಧಕರ ಹೆಸರು ಪ್ರಶಸ್ತಿ ಪಟ್ಟಿಯಲ್ಲಿದೆ. ಒಬ್ಬರಿಗೆ ಪದ್ಮವಿಭೂಷಣ, ಇಬ್ಬರಿಗೆ ಪದ್ಮಭೂಷಣ, 5 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ.
ಮಾಜಿ ಸಿಎಂ. ಎಸ್. ಎಂ. ಕೃಷ್ಣ ಅವರಿಗೆ ಪದ್ಮವಿಭೂಷಣ, ಇನ್ಫೋಸಿಸ್ ಸುಧಾಮೂರ್ತಿ, ಸಾಹಿತಿ ಎಸ್.ಎಲ್.ಭೈರಪ್ಪರಿಗೆ ಪದ್ಮಭೂಷಣ ಪ್ರಶಸ್ತಿ, ಲಭಿಸಿದೆ.
ಖಾದರ್ ವಲ್ಲಿ ದೂದೇಕುಲ(ವಿಜ್ಞಾನ ಮತ್ತು ಇಂಜಿನಿಯರಿಂಗ್), ರಾಣಿ ಮಾಚಯ್ಯ (ಕಲೆ), ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ (ಕಲೆ), ಐ ಶಾ ರಶೀದ್ ಅಹಮದ್ ಕ್ವಾದ್ರಿ (ಕಲೆ), ಶ್ರೀ ಸುಬ್ಬರಾಮನ್ (ಪುರಾತತ್ವ ಶಾಸ್ತ್ರ) ಅವರಿಗೆ ಪದ್ಮ ಪ್ರಶಸ್ತಿ ಲಭಿಸಿದೆ

ಕೊಡಗಿನ ಉಮ್ಮತ್ತಾಟ್ ಜಾನಪದ ನೃತ್ಯ, ಕಲೆಯ (ಜಾನಪದ ನೃತ್ಯ) ನರ್ತಕಿ, ಕೊಡವ ಸಂಸ್ಕೃತಿಯನ್ನು ಉಳಿಸಲು ಸಹಾಯ ಮಾಡಿದ ರಾಣಿ ಮಾಚಯ್ಯ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇನ್ನು ಜಾನಪದ ಸಂಗೀತ ಕ್ಷೇತ್ರದಲ್ಲಿ ಚಿಕ್ಕಬಳ್ಳಾಪುರದ ಮುನಿವೆಂಕಟಪ್ಪ ಅವರಿಗೂ ಪದ್ಮಶ್ರೀ ಪ್ರಶಸ್ತಿ ಸಲ್ಲುತ್ತಿದೆ. ಚಿಕ್ಕಬಳ್ಳಾಪುರದ ಹಿರಿಯ ತಮಟೆ ವಾದಕ ಮುನಿವೆಂಕಟಪ್ಪ, ಕಲೆ (ಜಾನಪದ ಸಂಗೀತ) ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜಾನಪದ ವಾದ್ಯ ತಮಟೆಯ ಸಂರಕ್ಷಣೆ ಮತ್ತು ಪ್ರಚಾರಕ್ಕಾಗಿ ಅವಿರತವಾಗಿ ಇಂದಿಗೂ ಅವರು ಶ್ರಮಿಸುತ್ತಿದ್ದಾರೆ.
ಒಆರ್ಎಸ್ (ORS) ಆವಿಷ್ಕಾರಕ್ಕಾಗಿ ಪದ್ಮವಿಭೂಷಣ :

ಪಶ್ಚಿಮ ಬಂಗಾಳದ ಡಾ.ದಿಲೀಪ್ ಮಹಲನೋಬಿಸ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ಒಆರ್ಎಸ್ (ORS) ಆವಿಷ್ಕಾರಕ್ಕಾಗಿ ಅವರಿಗೆ ಈ ಗೌರವ ನೀಡಲಾಗಿದೆ.
ಒಆರ್ಎಸ್ ಪ್ರವರ್ತಕ ದಿಲೀಪ್ ಮಹಾಲನಬಿಸ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ (ಪೀಡಿಯಾಟ್ರಿಕ್ಸ್) ಪದ್ಮವಿಭೂಷಣ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರಶಸ್ತಿ ಸಂದಿದೆ.

