Connect with us

Hi, what are you looking for?

ರಾಷ್ಟ್ರೀಯ

ಗುಂಡೇಟು ಬಿದ್ದರೂ ಉಗ್ರರ ವಿರುದ್ಧ ಹೋರಾಡಿದ್ದ ಭಾರತೀಯ ಸೇನೆಯ ಶ್ವಾನ ʻಜೂಮ್’ ಗೆ ಶೌರ್ಯ ಪ್ರಶಸ್ತಿ ಘೋಷಣೆ

1

ನವದೆಹಲಿ : ಸೇನಾ ಶ್ವಾನ ಘಟಕದ ಭಾರತೀಯ ಸೇನಾ ಶ್ವಾನ ‘ಜೂಮ್’ಗೆ ಮರಣೋತ್ತರವಾಗಿ ಡೆಸ್ಪ್ಯಾಚಸ್ ಪ್ರಶಸ್ತಿಯನ್ನು ನೀಡಲಾಗಿದೆ.

ಅಕ್ಟೋಬರ್ 9 ರಂದು ಜಮ್ಮು – ಕಾಶ್ಮೀರದ ಅನಂತನಾಗ್ ಜಿಲ್ಲೆಯ ತಂಗ್ಪಾವಾ ಪ್ರದೇಶದ ಮನೆಯೊಂದರಲ್ಲಿ ಇಬ್ಬರು ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಸೇನೆಗೆ ಸಿಕ್ಕಿತ್ತು. ಹೀಗಾಗಿ ಸೇನೆ ಶೋಧ ಕಾರ್ಯಾಚರಣೆ ನಡೆಸಿತ್ತು.

ಜೂಮ್ ಕಳೆದ ವರ್ಷ ಅಕ್ಟೋಬರ್ 13 ರಂದು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ನಡೆದ ಆಪರೇಷನ್ ಟಾಂಗ್‌ಪಾವಾದಲ್ಲಿ ಎರಡು ಗುಂಡೇಟಿನಿಂದ ಗಾಯಗೊಂಡು ಸಾವನ್ನಪ್ಪಿತ್ತು.

Advertisement. Scroll to continue reading.

ಉಗ್ರರು ಅಡಗಿರುವ ಶಂಕಿತ ಮನೆಯೊಳಕ್ಕೆ ಜೂಮ್ ಅನ್ನು ಕಳುಹಿಸಲಾಗಿತ್ತು. ಉಗ್ರಗಾಮಿಗಳನ್ನು ಪತ್ತೆ‌ ಹಚ್ಚಿದ ನಂತರ ದಾಳಿ ವೇಳೆ ಜೂಮ್‌ಗೆ ಎರಡು ಗುಂಡು ತಗುಲಿತ್ತು. ಆದರೂ ಜೂಮ್‌ ಉಗ್ರರ ವಿರುದ್ಧ ಹೋರಾಡಿತ್ತು.

ಜೂಮ್ 54 ಅಡ್ವಾನ್ಸ್ ಫೀಲ್ಡ್ ವೆಟರ್ನರಿ ಆಸ್ಪತ್ರೆಯಲ್ಲಿ (AFVH) ಚಿಕಿತ್ಸೆ ಪಡೆಯುತ್ತಿತ್ತು. ಅಕ್ಟೋಬರ್ 13, 2022 ರಂದು ಬೆಳಿಗ್ಗೆ 11:45 ರ ಸುಮಾರಿಗೆ ಉಸಿರುಗಟ್ಟಿ ಮೃತಪಟ್ಟಿತ್ತು.

ಎನ್‌ಕೌಂಟರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ ಉಗ್ರರು ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!