ಮಹಾರಾಷ್ಟ್ರ : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಹಾರಾಷ್ಟ್ರದ ನಾಸಿಕ್‌ನ ಕಲಾರಾಮ್ ದೇವಸ್ಥಾನದ ಆವರಣವನ್ನು ಸ್ವಚ್ಥಗೊಳಿಸುವ ಮೂಲಕ ‘ಸ್ವಚ್ಛತಾ ಅಭಿಯಾನ’ದಲ್ಲಿ ಪಾಲ್ಗೊಳ್ಳುವಂತೆ ದೇಶದ ಜನತೆಗೆ ಕರೆ ನೀಡಿದರು.
ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭಕ್ಕೆ ಮುಂಚಿತವಾಗಿ ದೇಶಾದ್ಯಂತದ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳುವಂತೆ ಅವರು ಜನರಿಗೆ ಮನವಿ ಮಾಡಿದರು.
ಪ್ರಧಾನಿ ನಾಸಿಕ್‌ನ ಕಲಾರಾಮ್ ದೇವಾಲಯದ ಮರದ ಬಳಿಯ ಪ್ರದೇಶವನ್ನು ಬಕೆಟ್ ಮತ್ತು ಮಾಪ್ ಬಳಸಿ ಸ್ವಚ್ಛಗೊಳಿಸುತ್ತಿರುವ ದೃಶ್ಯ ವೀಡಿಯೋದಲ್ಲಿದೆ.
ಜನವರಿ 22, 2024 ರಂದು ಅಯೋಧ್ಯೆಯಲ್ಲಿ ಭಗವಾನ್ ರಾಮನ ಪ್ರಾಣ ಪ್ರತಿಷ್ಠಾನದ ಆಗಮನದ ಹಿನ್ನೆಲೆಯಲ್ಲಿ ಧಾರ್ಮಿಕ ಪ್ರಾಮುಖ್ಯತೆಯ ಸ್ಥಳಗಳನ್ನು ಸ್ವಚ್ಛಗೊಳಿಸಲು ಪಿಎಂ ಮೋದಿ ಸ್ವಚ್ಛತಾ ಅಭಿಯಾನವನ್ನು ಘೋಷಿಸಿದ್ದರು.
ಅಲ್ಲದೇ ತಾವೂ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ಶ್ರೀ ಕಲಾರಾಮ್ ಮಂದಿರದ ಆವರಣವನ್ನು ಸ್ವಚ್ಛಗೊಳಿಸಿದರು.
ಪ್ರಧಾನಿ ಮೋದಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದು ಇದೇ ಮೊದಲಲ್ಲ. ಈ ಹಿಂದೆಯೂ ಅವರದ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸ್ವಚ್ಛತಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.