ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಕುಂದಾಪುರ ಮಂಡಲದ ಕೋಟೇಶ್ವರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಹಂಗಳೂರು ಬೂತ್ ಸಂಖ್ಯೆ 3ರಲ್ಲಿ ಇಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರು ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಮನೆಗೆ ಗೋಡೆ ಬರಹ ಹಾಗೂ ಪಕ್ಷದ ಸ್ಟಿಕರ್ ಅಳವಡಿಸುವುದರ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರತಿ ಬೂತ್ ನಲ್ಲು ಈ ಕಾರ್ಯಕ್ರಮ ನಡೆಯುತ್ತಿದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮತ್ತು ಸ್ಥಳೀಯ ಶಾಸಕರ ಸಾಧನೆಗಳ ಸಮಗ್ರ ಮಾಹಿತಿ ಇರುವ ಕರಪತ್ರವನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ತಿಳಿಸಬೇಕು ಆ ಮೂಲಕ ಪ್ರತಿ ಬೂತ್ ಗಳಲ್ಲೂ ಅತೀ ಹೆಚ್ಚು ಮತಗಳ ಅಂತರ ಪಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನ ಕುದ್ರು, ಅಭಿಯಾನದ ಜಿಲ್ಲಾ ಸಹಸಂಚಾಲಕಿ ಗೀತಾಂಜಲಿ ಸುವರ್ಣ, ಮಂಗಳೂರು ವಿಭಾಗ ಪ್ರಭಾರಿ ರಾಜೇಶ್ ಕಾವೇರಿ, ಕುಂದಾಪುರ ಮಂಡಲ ಪ್ರಭಾರಿ ಸುಪ್ರಸಾದ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಸುರೇಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗೋಪಾಲ್ ಕಳಂಜಿ, ಅಭಿಯಾನದ ಮಂಡಲ ಪ್ರಮುಖರಾದ ಸುರೇಂದ್ರ ಕಾಂಚನ್, ಅರುಣ್ ಭಾಣ, ವಿದ್ಯಾ ಸಾಲಿಯಾನ್, ಕೋಟೇಶ್ವರ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಾಗರಾಜ್ ಆಚಾರ್, ಬೂತ್ ಅಧ್ಯಕ್ಷ ಹರೀಶ್ ಪೂಜಾರಿ, ಹಂಗಳೂರು ಗ್ರಾಮ ಪಂಚಾಯತ್ ಅಧ್ಯಕ್ಷ ಆನಂದ ಪೂಜಾರಿ, ಮುಖಂಡರಾದ ಶಾನಾಡಿ ಸಂಪತ್ ಶೆಟ್ಟಿ, ಪ್ರಣಯ್ ಶೆಟ್ಟಿ, ವಿವಿಧ ಮೋರ್ಚಾ, ಪ್ರಕೋಷ್ಠಗಳ, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪ್ಥಿತರಿದ್ದರು.
ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.

