Connect with us

Hi, what are you looking for?

Diksoochi News

ರಾಷ್ಟ್ರೀಯ

ಗಾಳಿಪಟ ಹಾರಿಸುತ್ತಿದ್ದಾಗ ದುರಂತ; ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

1

ಹೈದಾರಾಬಾದ್ : ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವ ಘಟನೆ ಅತ್ತಾಪುರದಲ್ಲಿ ನಡೆದಿದೆ.

ತನಿಷ್ಕ್ (11) ಮೃತಪಟ್ಟ ಬಾಲಕ. ಮನೆಗೆ ತಂದಿದ್ದ ಗಾಳಿಪಟ ಹಾರಿಸುವ ಖಷಿಯಲ್ಲಿ ತನಿಷ್ಕ್ ಮನೆಯ ಟೆರೇಸ್ ಮೇಲೆ ಹೋಗಿದ್ದಾನೆ.

ಆದರೆ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತಪಟ್ಟಿದ್ದಾನೆ.

Advertisement. Scroll to continue reading.

ತನಿಷ್ಕ್ ಮನೆಯ ಮಹಡಿ ಮೇಲೆ ನಿಂತು ಗಾಳಿ ಪಟ ಹಾರಿಸುವ ವೇಳೆ ಗಾಳಿ ಪಟದ ದಾರ ವಿದ್ಯುತ್ ತಂತಿಗೆ ಸಿಲುಕಿಕೊಂಡಿದೆ. ಅದನ್ನು ಬಿಡಿಸಲು ಹೋದಾಗ ಬಾಲಕನಿಗೆ ವಿದ್ಯುತ್ ಪ್ರವಹಿಸಿದೆ. ತಕ್ಷಣ ಬಾಲಕ ಕಿರುಚಿಕೊಂಡಿದ್ದಾನೆ.

ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಮಕರ ಸಂಕ್ರಾಂತಿಯ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!