ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.
ಜಯಂತ್(70) ಆತ್ಮಹತ್ಯೆ ಮಾಡಿಕೊಂಡ ವೃದ್ಧ.
ಜಯಂತ್ ಅವರು 6 ತಿಂಗಳಿನಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು,ಈ ಬಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
Advertisement. Scroll to continue reading.
ಇದೇ ವಿಚಾರವಾಗಿ ಮನನೊಂದು ಜ.12 ರ ಮಧ್ಯಾಹ್ನ ಮನೆಯ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.