ಚಂದನವನ : ಉದ್ಯೋಗ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ನಿರ್ಮಾಪಕ ಪ್ರಕಾಶ್ನನ್ನು ಬಂಧಿಸಲಾಗಿದೆ.
ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನಿರ್ಮಾಪಕ ಪ್ರಕಾಶ್ನನ್ನು ಅಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ
ಕೆಎಂಎಫ್ ನಲ್ಲಿ 20 ಲಕ್ಷಕ್ಕೆ ತಾಂತ್ರಿಕ ಅಧಿಕಾರಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಚಿಕ್ಕಬಳ್ಳಾಪುರ ಮೂಲದ ಚರಣ್ ಎಂಬುವವರಿಗೆ ವಂಚಿಸಿದ್ದಾರೆ ಎನ್ನಲಾಗಿದೆ.
Advertisement. Scroll to continue reading.

ಚರಣ್ ಎಂಬವರಿಂದ ಮುಂಗಡವಾಗಿ 10 ಲಕ್ಷ ಹಣ ಪಡೆದಿದ್ದರು ಎನ್ನಲಾಗಿದೆ. ಕಳೆದ ಡಿಸೆಂಬರ್ನಲ್ಲಿ ಕೆಎಂಎಫ್ ನಲ್ಲಿ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆ ನಡೆದಿತ್ತು. ಕೆಎಂಎಫ್ ನಿರ್ದೇಶಕರ ಸರ್ಕಾರಿ ಲಾಂಛನ ನಕಲು ಮಾಡಿ ಈತ ಹುದ್ದೆಯ ಆದೇಶದ ಪ್ರತಿ ನೀಡುತ್ತಿದ್ದನು ಎನ್ನಲಾಗಿದೆ.
ಸದ್ಯ ಚರಣ್ ನೀಡಿದ ದೂರಿನ ಮೇರೆಗೆ ಪ್ರಕಾಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ನಟ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಶಬಾಷ್ ಬಡ್ಡಿ ಮಗನೇ ಸಿನಿಮಾಕ್ಕೆ ಪ್ರಕಾಶ್ ಬಂಡವಾಳ ಹೂಡಿದ್ದಾರೆ.
Advertisement. Scroll to continue reading.

In this article:Prakash, pramod shetty, producer, shahabhash baddi magane, ಶಹಭಾಷ್ ಬಡ್ಡಿ ಮಗನೇ

Click to comment