ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಇಂದು ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಜಮುನಾ ಇಂದು ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
ಜಮುನಾ ಅವರು ಪುತ್ರ ವಂಶಿ ಜುಲೂರಿ ಮತ್ತು ಮಗಳು ಶ್ರವಂತಿಯನ್ನು ಅಗಲಿದ್ದಾರೆ.
1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದ್ದಾರೆ. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಅವರ ಪತಿ ಜುಲೂರಿ ರಮಣ ರಾವ್ ಪ್ರಾಧ್ಯಾಪಕರಾಗಿದ್ದರು ಮತ್ತು ಅವರು 2014 ರಲ್ಲಿ ನಿಧನರಾಗಿದ್ದರು.
ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್‌ನಲ್ಲಿರುವ ಫಿಲಂ ಚೇಂಬರ್‌ಗೆ ತರಲಾಗುತ್ತದೆ. ಅಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ
ಡಾ.ರಾಜ್‌ಕುಮಾರ್, ಜಮುನಾ ಎನ್ಟಿಆರ್, ಎಎನ್‌ಆರ್, ಕೃಷ್ಣ, ಶೋಭನ್ ಬಾಬು ಮತ್ತು ಇತರ ಅನೇಕ ಸ್ಟಾರ್ ನಟರೊಂದಿಗೆ ನಟಿಸಿದ್ದಾರೆ. ಅವರು ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ನೂರಾರು ಪಾತ್ರಗಳನ್ನು ನಿರ್ವಹಿಸಿದ್ದಾರೆ.
ಸತ್ಯಭಾಮ ಪಾತ್ರದ ಮೂಲಕ ಜಮುನಾ ಹೆಚ್ಚು ಗುರುತಿಸಲ್ಪಟ್ಟರು. ಕನ್ನಡದಲ್ಲಿ ಜಮುನಾ 8 ಚಿತ್ರಗಳಲ್ಲಿ ನಟಿಸಿದ್ದರು. ‘ತೆನಾಲಿ ರಾಮಕೃಷ್ಣ’, ‘ಭೂಕೈಲಾಸ’ ಮೊದಲಾದ ಸಿನಿಮಾಗಳಲ್ಲಿ ಜಮುನಾ ಬಣ್ಣ ಹಚ್ಚಿದ್ದರು.

ಜಮುನಾ ಅವರು 1965ರಲ್ಲಿ ಪ್ರೊಫೆಸರ್ ಜುಲುರಿ ರಮಣ ರಾವ್ ಅವರನ್ನು ಮದುವೆ ಆಗಿದ್ದರು. 2014ರಲ್ಲಿ ಅವರು ಮೃತಪಟ್ಟರು.
ಜಮುನಾ ಅವರ ನಟನೆಗೆ ಅನೇಕ ಪ್ರಶಸ್ತಿಗಳು ಲಭಿಸಿವೆ. ಜಮುನಾ ಅವರು ನಟನೆಯ ಜತೆಗೆ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. 1980ರಲ್ಲಿ ಅವರು ಕಾಂಗ್ರೆಸ್‌ಗೆ ಸೇರ್ಪಡೆ ಆದರು. 1989ರಲ್ಲಿ ಜಮುನಾ ಅವರು ರಾಜಮಂಡ್ರಿಯಿಂದ ಸಂಸದೆ ಆಗಿ ಆಯ್ಕೆ ಆದರು. 1991ರಲ್ಲಿ ನಡೆದ ಚುನಾವಣೆಯಲ್ಲಿ ಅವರು ಸೋತರು. ಆ ಬಳಿಕ ರಾಜಕೀಯದಿಂದ ಹೊರನಡೆದರು. 1989 ರಲ್ಲಿ ರಾಜಮಂಡ್ರಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. ನಂತರ ಅವರು ಆಗಾಗ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದರು.
ಜಮುನಾ ತೆಲುಗು ಆರ್ಟಿಸ್ಟ್ ಅಸೋಸಿಯೇಷನ್ ಸ್ಥಾಪಿಸಿದ್ದು, ಕಳೆದ 25 ವರ್ಷಗಳಿಂದ ಅದರ ಮೂಲಕ ಸಮಾಜ ಸೇವೆ ಮಾಡುತ್ತಿದ್ದರು.

