Connect with us

Hi, what are you looking for?

Diksoochi News

ಕ್ರೀಡೆ

ಇಂದು ಭಾರತ – ಅಫ್ಘಾನಿಸ್ತಾನ್ 2ನೇ ಟಿ20 ಪಂದ್ಯ

0

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯ ಇಂದೋರ್‌ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಟೀಂ ಇಂಡಿಯಾ ಮೊದಲ ಪಂದ್ಯವನ್ನು ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಈ ಟಿ20 ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಲು ಬಯಸಿದೆ.

ಕೊಹ್ಲಿ ಆಗಮನ :

Advertisement. Scroll to continue reading.

ವೈಯಕ್ತಿಕ ಕಾರಣಗಳಿಂದ ಮೊದಲ ಪಂದ್ಯದಲ್ಲಿ ಆಡದಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ ಕೊನೆಯ ಬಾರಿಗೆ ಕಣಕ್ಕಿಳಿದಿದ್ದ ಕೊಹ್ಲಿ ಆ ಬಳಿಕ ಭಾರತ ಪರ ಟಿ20 ಕ್ರಿಕೆಟ್​ ಆಡಿರಲಿಲ್ಲ. ಇದೀಗ 14 ತಿಂಗಳುಗಳ ಬಳಿಕ ಮತ್ತೊಮ್ಮೆ ಚುಟುಕು ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲು ಸಜ್ಜಾಗಿದ್ದಾರೆ.

ಎಷ್ಟು ಗಂಟೆಗೆ ಪಂದ್ಯ ಶುರು?

ಇಂದೋರ್​ನ ಹೋಲ್ಕರ್ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಅದಕ್ಕೂ ಮುನ್ನ 6.30 ಕ್ಕೆ ಟಾಸ್ ಪ್ರಕ್ರಿಯೆ ಜರುಗಲಿದೆ.

ಯಾವ ಚಾನೆಲ್‌ನಲ್ಲಿ ನೇರ ಪ್ರಸಾರ?

ಈ ಪಂದ್ಯದ ನೇರ ಪ್ರಸಾರವು ಸ್ಪೋರ್ಟ್ಸ್​ 18 ಚಾನೆಲ್​ನಲ್ಲಿ ಇರಲಿದೆ. ಹಾಗೆಯೇ ಜಿಯೋ ಸಿನಿಮಾ ಆ್ಯಪ್​ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

Advertisement. Scroll to continue reading.

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ.

ಅಫ್ಘಾನಿಸ್ತಾನ್ ತಂಡ: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್) , ಇಬ್ರಾಹಿಂ ಝದ್ರಾನ್ (ನಾಯಕ) , ಹಝರತುಲ್ಲಾ ಝಝೈ , ನಜಿಬುಲ್ಲಾ ಝದ್ರಾನ್ , ಮೊಹಮ್ಮದ್ ನಬಿ , ಅಜ್ಮತುಲ್ಲಾ ಒಮರ್​ಝೈ , ಮುಜೀಬ್ ಉರ್ ರಹಮಾನ್ , ಶರಫುದ್ದೀನ್ ಅಶ್ರಫ್ , ಖೈಸ್ ಅಹ್ಮದ್ , ನವೀನ್ -ಉಲ್-ಹಕ್, ಫಝಲ್​ ಹಕ್ ಫಾರೂಖಿ, ನೂರ್ ಅಹ್ಮದ್, ಮೊಹಮ್ಮದ್ ಸಲೀಂ ಶಫಿ, ಕರೀಂ ಜನತ್ , ಇಕ್ರಮ್ ಅಲಿಖಿಲ್ , ಫರೀದ್ ಅಹ್ಮದ್ ಮಲಿಕ್ , ರಹಮತ್ ಶಾ , ಗುಲ್ಬದಿನ್ ನೈಬ್.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಪೆರ್ಡೂರು : ಆರ್‌.ಸಿ.ಸಿ ಬೆಳ್ಳರ್ಪಾಡಿ, ರೋಟರಿ ಕ್ಲಬ್ ಮಣಿಪಾಲ ಟೌನ್, ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ ಪೆರ್ಡೂರು ಶಾಖೆ ಇವರ ಸಹಯೋಗದಲ್ಲಿ ವನಮಹೋತ್ಸವ, ಸಸಿ ವಿತರಣೆ ಮತ್ತು ಸನ್ಮಾನ ಸಮಾರಂಭ...

error: Content is protected !!