Connect with us

Hi, what are you looking for?

ಕ್ರೀಡೆ

Watch : ನನ್ನ ವೃತ್ತಿಜೀವನ ಮೆಲ್ಬೋರ್ನ್‌ನಲ್ಲಿ ಪ್ರಾರಂಭವಾಯಿತು…ಇಲ್ಲೇ ಮುಗಿಯಿತು ಸಾನಿಯಾ ಮಿರ್ಜಾ ಕಣ್ಣೀರು| Video

0

ಆಸ್ಟ್ರೇಲಿಯನ್ ಓಪನ್ 2023ರ ಮಿಶ್ರ ಡಬಲ್ಸ್ ವಿಭಾಗದ ಫೈನಲ್‌ನಲ್ಲಿ ಸಾನಿಯಾ ಮತ್ತು ರೋಹನ್ ಬೋಪಣ್ಣ ಜೋಡಿ 6-7, 6-2 ಸೆಟ್‌ಗಳಿಂದ ಸೋತಿದ್ದಾರೆ. ಇದರ ಬೆನ್ನಲ್ಲೇ ಈ ಕುರಿತು ಇದು ನನ್ನ ತಮ್ಮ ಕೊನೆಯ ಗ್ರ್ಯಾಂಡ್‌ ಸ್ಲಾಂನ ಟೂರ್ನಿ ಎಂದು ಸಾನಿಯಾ ಮಿರ್ಜಾ ಕಣ್ಣೀರು ಹಾಕಿದ್ದಾರೆ.

ಆಸ್ಟ್ರೇಲಿಯನ್ ಓಪನ್ 2023ರ ಮಿಶ್ರ ಡಬಲ್ಸ್ ಫೈನಲ್ ನಲ್ಲಿ ಸಾನಿಯಾ ಮಿರ್ಜಾ ಮತ್ತು ರೋಹನ್ ಬೋಪಣ್ಣ ಜೋಡಿ ಬ್ರೆಜಿಲ್ ನ ಲೂಯಿಸಾ ಸ್ಟೆಫಾನಿ ಮತ್ತು ರಾಫೆಲ್ ಮಾಟೋಸ್ ವಿರುದ್ಧ 6-7, 2-6 ಸೆಟ್ ಗಳಿಂದ ಸೋಲು ಅನುಭವಿಸಿದ್ದು ನಿರಾಸೆ ಮೂಡಿಸಿದೆ.

ಸಾನಿಯಾ ಮಿರ್ಜಾ ತಮ್ಮ ವೃತ್ತಿಜೀವನದಲ್ಲಿ ಮೂರು ಮಹಿಳಾ ಡಬಲ್ಸ್ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದಿದ್ದರೆ, ಬೋಪಣ್ಣ ಒಂದು ಮಿಶ್ರ ಡಬಲ್ಸ್ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.

Advertisement. Scroll to continue reading.

2023ರ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಸೆಮಿಫೈನಲ್ನಲ್ಲಿ ಸಾನಿಯಾ-ಬೋಪಣ್ಣ ಜೋಡಿ 7-6(5), 6-7(5), 10-6 ಸೆಟ್ಗಳಲ್ಲಿ ಮೂರನೇ ಶ್ರೇಯಾಂಕದ ದೇಸಿರೆ ಕ್ರಾವ್ಜಿಕ್ ಮತ್ತು ನೀಲ್ ಸ್ಕುಪ್ಸ್ಕಿ ಅವರನ್ನು ಮಣಿಸಿತ್ತು. ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಈ ಜೋಡಿಗೆ ವಾಕ್ ಓವರ್ ಸಿಕ್ಕಿತ್ತು.

ಮಹಿಳೆಯರ ಡಬಲ್ಸ್‌ ವಿಭಾಗದಲ್ಲಿ 2ನೇ ಸುತ್ತಿನಲ್ಲಿಯೇ ಸೋಲು ಕಂಡು ನಿರಾಸೆ ಎದುರಿಸಿದ್ದ ಸಾನಿಯಾ ಮಿರ್ಜಾ, ಮಿಶ್ರ ಡಬಲ್ಸ್‌ ವಿಭಾಗದಲ್ಲಿ ಫೈನಲ್‌ಗೇರುವ ಮೂಲಕ ಪ್ರಶಸ್ತಿಯ ನಿರೀಕ್ಷೆ ಇಟ್ಟಿದ್ದರು. ಆದರೆ, ಫೈನಲ್‌ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಗೆಲುವಿನ ವಿದಾಯ ಹೇಳುವ ಸಾನಿಯಾ ಮಿರ್ಜಾ ಅವರ ಕನಸು ಭಗ್ನಗೊಂಡಿತು.

ಸಾನಿಯಾ ಕಣ್ಣೀರು :

ಪಂದ್ಯದ ನಂತರ ಮಾತನಾಡಿದ ಸಾನಿಯಾ ಮಿರ್ಜಾ, ನನ್ನ ವೃತ್ತಿಜೀವನವು ಮೆಲ್ಬೋರ್ನ್‌ನಲ್ಲಿ 2005 ರಲ್ಲಿ ಪ್ರಾರಂಭವಾಯಿತು, 2005ರಲ್ಲಿ ನಾನು ಇಲ್ಲಿ ಸೆರೇನಾ ವಿಲಿಯಮ್ಸ್‌ರನ್ನು ಮೂರನೇ ಸುತ್ತಿನಲ್ಲಿ ಎದುರಿಸಿದ್ದೆ. ಆಗ ನನಗೆ 18 ವರ್ಷ. 18 ವರ್ಷಗಳ ಹಿಂದಿನ ಆ ದಿನವನ್ನು ನೆನಪಿಸಿಕೊಂಡರೆ ಈಗಲೂ ಭಯವಾಗುತ್ತದೆಂದು ವೇದಿಕೆಯಲ್ಲಿ ಮಾತನಾಡುತ್ತಾ ʻಆನಂದ ಭಾಷ್ಪʼ ಕಣ್ಣೀರು ಸುರಿಸಿದ್ದಾರೆ ‘ನಾನು ಅಳುತ್ತಿದ್ದರೆ, ಇದು ಸಂತೋಷದ ಕಣ್ಣೀರು ಎಂದಿದ್ದಾರೆ.

Advertisement. Scroll to continue reading.

ಇಲ್ಲಿಗೆ ಬಂದು ಸಾಕಷ್ಟು ಉತ್ತಮ ಟೆನಿಸ್‌ ಆಟ ಆಡಿ , ಕೆಲವೊಂದು ಪ್ರಶಸ್ತಿ ಗೆದ್ದಿದ್ದಕ್ಕೆ ನನಗೆ ಬಹಳ ಸಂಭ್ರಮವಿದೆ. ರಾಡ್‌ ಲೆವರ್‌ ಅರೇನಾ ಎನ್ನುವುದು ನನ್ನ ಜೀವನದಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿರುತ್ತದೆ. ನನ್ನ ಗ್ರ್ಯಾಂಡ್‌ ಸ್ಲಾಂ ವೃತ್ತಿಜೀವನ ಕೊನೆ ಮಾಡಲು ಇದಕ್ಕಿಂತ ಉತ್ತಮ ಕ್ರೀಡಾಂಗಣವಿಲ್ಲ’ ಎಂದು ಸಾನಿಯಾ ಹೇಳಿದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!