ಅಫ್ಘಾನಿಸ್ತಾನ ವಿರುದ್ಧದ T20 ಸರಣಿಯ 2ನೇ ಪಂದ್ಯದಲ್ಲಿ ಭಾರತ ತಂಡ ಮೊದಲು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದೆ. ಇದರ ನಡುವೆ ನಾಯಕ ರೋಹಿತ್ ಎರಡನೇ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆ ಟಿ20 ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಎರಡನೇ ಟಿ20 ಪಂದ್ಯ ಇಂದೋರ್‌ನಲ್ಲಿ ನಡೆಯುತ್ತಿದೆ. ಈ ಸಂದರ್ಭ ರೋಹಿತ್ ಶರ್ಮಾ ಮೈದಾನಕ್ಕಿಳಿಯುತ್ತಿದ್ದಂತೆ ದಾಖಲೆ ನಿರ್ಮಿಸಿದ್ದಾರೆ.
ಇದು ಟಿ20 ಕ್ರಿಕೆಟ್ ಇತಿಹಾಸದಲ್ಲಿ ಈ ಹಿಂದೆ ಯಾರೂ ಮಾಡದ ದಾಖಲೆ.
150ನೇ ಟಿ20 ಅಂತಾರಾಷ್ಟ್ರೀಯ ಪಂದ್ಯವಾಡಿದ ವಿಶ್ವದ ಮೊದಲ ಕ್ರಿಕೆಟಿಗನಾಗಿ ಹೊರಹೊಮ್ಮಿದ್ದಾರೆ. ಈ ಸಾಧನೆ ಮಾಡಿದ ವಿಶ್ವ ಮೊದಲ ಆಟಗಾರ ಎಂಬ ದಾಖಲೆ ರೋಹಿತ್ ಪಾಲಾಗಲಿದೆ. ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಐರ್ಲೆಂಡ್ ಆಟಗಾರ ಪೌಲ್ ಸ್ಟೀರ್ಲಿಂಗ್ ಈವರೆಗೆ ಒಟ್ಟು 134 ಟಿ20 ಪಂದ್ಯಗಳನ್ನಾಡಿದ್ದಾರೆ.
ರೋಹಿತ್ ಶರ್ಮಾ ಈವರೆಗೆ ಟಿ20 ಕ್ರಿಕೆಟ್‌ನಲ್ಲಿ ಒಟ್ಟು 3853 ರನ್ ಗಳಿಸಿದ್ದು, ಟಿ20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಇದಕ್ಕೂ ಮೊದಲು ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20ಯಲ್ಲಿ 100 ಗೆಲುವು ದಾಖಲಿಸಿದ ಮೊದಲ ಪುರುಷ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಒಟ್ಟಾರೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳ ಗೆಲುವಿನಲ್ಲಿ ರೋಹಿತ್‌ಗಿಂತ ಮೊದಲು ಮೂವರು ಮಹಿಳಾ ಕ್ರಿಕೆಟಿಗರು ಈ ಸಾಧನೆ ಮಾಡಿದ್ದಾರೆ.
ಅಲ್ಲದೇ, ಟಿ20ಯಲ್ಲಿ ರನ್ ಔಟ್ ವಿಚಾರದಲ್ಲಿ ಮಾಜಿ ನಾಯಕ ಧೋನಿ ಹಾಗೂ ವಿರಾಟ್ ಕೊಹ್ಲಿ ಜೊತೆಗೆ ಈಗ ರೋಹಿತ್ ಕೂಡ ಅವರ ಜೊತೆ ಅಗ್ರಸ್ಥಾನದಲ್ಲಿದ್ದಾರೆ.