ಶಂಕರನಾರಾಯಣ : ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಅಲ್ಬಾಡಿ ಗ್ರಾಮದಲ್ಲಿ ನಡೆದಿದೆ. ಚನ್ನಕೇಶವ (43) ಮೃತ ವ್ಯಕ್ತಿ.
ಚೆನ್ನಕೇಶವ ಅವರು ಕೊಂಜಾಡಿಯ ರಾಜೀವ ಶೆಟ್ಟಿ ಅವರ ಮನೆಯ ತೆಂಗಿನ ಮರ ಹತ್ತಿ ಕಾಯಿ ಕೊಯ್ಯುತ್ತಿದ್ದರು.ಈ ವೇಳೆ ತೆಂಗಿನ ಮರದಿಂದ ಅಕಸ್ಮಿಕವಾಗಿ ತೆಂಗಿನ ಮರದಿಂದ ಕೆಳಗಡೆ ಬಿದ್ದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಬಗ್ಗೆ ಬೆಳ್ವೆ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆ ಬಗ್ಗೆ ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.
ಆದರೆ, ಅವರನ್ನು ಪರಿಕ್ಷೀಸಿದ ವೈದ್ಯರು ಚನ್ನಕೇಶವ ರವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.

In this article:coconut tree, death, Diksoochi news, diksoochi Tv, diksoochi udupi, hebri, ಹೆಬ್ರಿ

Click to comment