ಗದಗ : ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ದಿನ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಯುವಕರ ಕುಟುಂಬಕ್ಕೆ ನಟನ ಕಡೆಯಿಂದ ಪರಿಹಾರದ ಚೆಕ್ ತಲುಪಿದೆ.
ಯಶ್ ಅವರ ಆಪ್ತರು ನಿನ್ನೆ ಗ್ರಾಮಕ್ಕೆ ಭೇಟಿ ನೀಡಿ ಯಶೋಮಾರ್ಗ ಫೌಂಡೇಶನ್ ಕಡೆಯಿಂದ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದ್ದಾರೆ. ಯಶ್ ಸ್ನೇಹಿತರು ಬಂದು ಪರಿಹಾರ ಹಣ ನೀಡಿದ್ದಾಗ ಕುಟುಂಬಸ್ಥರು ಕಣ್ಣೀರು ಹರಿಸಿದ್ದಾರೆ.
ಯಶ್ ಅವರ ಸ್ನೇಹಿತರಾದ ಚೇತನ್ ಹಾಗೂ ರಾಕೇಶ್ ದುರಂತ ಸಂಭವಿಸಿದ್ದ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮನೆ ಮಕ್ಕಳನ್ನು ಕಳೆದುಕೊಂಡ ಮೂರೂ ಕುಟುಂಬಗಳಿಗೆ ಸಾಂತ್ವನ ಹೇಳಿ ಪರಿಹಾರದ ಹಣ ನೀಡಿದರು.
Advertisement. Scroll to continue reading.
ಗದಗ ಜಿಲ್ಲೆಯ ಸೊರಣಗಿ ಗ್ರಾಮದ ಅಭಿಮಾನಿಗಳು ಯಶ್ ಹುಟ್ಟುಹಬ್ಬ ಆಚರಣೆ ಸಲುವಾಗಿ ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮುರಳಿ, ನವೀನ್ ಮತ್ತು ಹನುಮಂತ ಮೃತಪಟ್ಟಿದ್ದರು. ಜನವರಿ 7ರಂದು ರಾತ್ರಿ ಈ ದುರ್ಘಟನೆ ನಡೆದಿದ