ರಾಮಮಂದಿರ ನಿರ್ಮಾಣದ ನೇರ ಪ್ರಸಾರಕ್ಕೆ ಅನುಮತಿ ತಿರಸ್ಕರಿಸುವಂತಿಲ್ಲ ಎಂದು ತಮಿಳುನಾಡಿಗೆ ಸುಪ್ರೀಂ ಕೋರ್ಟ್ ಹೇಳಿದೆ..
ಅಯೋಧ್ಯೆಯಲ್ಲಿರುವ ಭಗವಾನ್ ರಾಮನ “ಪ್ರಾಣ ಪ್ರತಿಷ್ಠಾಪನೆಯ ನೇರ ಪ್ರಸಾರವನ್ನು ತಮಿಳುನಾಡಿನಾದ್ಯಂತದ ದೇವಾಲಯಗಳಲ್ಲಿ ನಿಷೇಧಿಸಿದ ರಾಜ್ಯ ಸರ್ಕಾರದ ಮೌಖಿಕ ಆದೇಶದ ವಿರುದ್ಧ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರ ಮತ್ತು ಇತರರಿಗೆ ನೋಟಿಸ್ ನೀಡಿದೆ.
ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನೇತೃತ್ವದ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ತಮಿಳುನಾಡು ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ಜನವರಿ 29 ರೊಳಗೆ ಅರ್ಜಿಯ ಬಗ್ಗೆ ತಮಿಳುನಾಡು ಸರ್ಕಾರದ ಪ್ರತಿಕ್ರಿಯೆಯನ್ನು ಪೀಠವು ಕೇಳಿದೆ.
Advertisement. Scroll to continue reading.