ಬೆಂಗಳೂರು : ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ತುಳು ಭಾಷೆಯನ್ನು ದೇಶದ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಬೇಡಿಕೆಯಿದೆ. ಹಲವು ವರ್ಷಗಳಿಂದ ತುಳುವರಿಂದ ಪ್ರತಿಭಟನೆ ನಡೆದಿದೆ.
ಇದೀಗ ಈ ಬಗ್ಗೆ ಸಚಿವ ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದಾರೆ. ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ. ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ,ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ|| ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ.— Sunil Kumar Karkala (@karkalasunil) January 30, 2023
