ದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸೋಮವಾರ ತಡರಾತ್ರಿ ಅಪರಿಚಿತ ವ್ಯಕ್ತಿಯಿಂದ ಕೊಲೆ ಬೆದರಿಕೆ ಬಂದಿದೆ.
ಸೋಮವಾರ ಮಧ್ಯರಾತ್ರಿ 12.05 ಕ್ಕೆ ಪಿಸಿಆರ್ ಕರೆ ಮಾಡುವ ಮೂಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಕರೆ ಬಂದ ನಂತರ ದೆಹಲಿ ಪೊಲೀಸರು ಆತನನ್ನು ಗುರುತಿಸಿದ್ದು, ಕೂಡಲೇ ಆತನನ್ನು ಬಂಧಿಸಲಾಯಿತು. ಪೊಲೀಸರ ಪ್ರಕಾರ, ಕರೆ ಮಾಡಿದ ವ್ಯಕ್ತಿ 38 ವರ್ಷದ ಮಾನಸಿಕ ಅಸ್ವಸ್ಥ ವ್ಯಕ್ತಿ ತಿಳಿಯಲಾಗಿದೆ. ಇದೀಗ ಆರೋಪಿ ದೆಹಲಿಯ ಗುಲಾಬಿ ಬಾಗ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿಯಲಾಗಿದೆ.
Advertisement. Scroll to continue reading.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈ ರೀತಿ ಬೆದರಿಕೆ ಕರೆ ಬರುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಹಲವಾರು ಬಾರಿ ಅವರಿಗೆ ಬೆದರಿಕೆ ಕರೆಗಳು ಬಂದಿವೆ.
In this article:Delhi CM Arvind Kejriwal, Diksoochi news, diksoochi Tv, diksoochi udupi, threat

Click to comment