Connect with us

Hi, what are you looking for?

Diksoochi News

ಸಿನಿಮಾ

ಖುಷಿ ಸಂಜಯ್ ಮಗಳು; ನಾನು ನನ್ನನ್ನು ಪ್ರೀತಿಸುವವರ ಜತೆ ಸಂತೋಷದಿಂದ ಇರಬೇಕೆಂದಿದ್ದೇನೆ : ಪವಿತ್ರಾ ಗೌಡ

0

ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಪವಿತ್ರ ಗೌಡ ನಡುವಿನ ಜಟಾಪಟಿ ಮುಗಿಯುವಂತೆ ಕಾಣುತ್ತಿಲ್ಲ. ನೆನ್ನೆಯಷ್ಟೇ ವಿಜಯಲಕ್ಷ್ಮಿ ದರ್ಶನ್ ಕಾನೂನು ಸಮರದ ಎಚ್ಚರಿಕೆ ನೀಡಿದ್ದರು. ಇದೀಗ ಪವಿತ್ರ ಗೌಡ ಪೋಸ್ಟ್ ಮಾಡಿದ್ದಾರೆ.

ನನಗೂ legal action ತಗೊಳೋ ಹಕ್ಕು ಇದೆ ,ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ, ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ ಎಂದು ಹೇಳಿ ವಿಜಯಲಕ್ಷ್ಮಿ ಅವರನ್ನು ಟ್ಯಾಗ್ ಮಾಡಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?

Advertisement. Scroll to continue reading.

ಉರಿವ ಹಣತೆಯ ಫೋಟೋವೊಂದನ್ನು ಪವಿತ್ರ ಗೌಡ ಹಂಚಿಕೊಂಡಿದ್ದಾರೆ. ಅದರೊಂದಿಗೆ,

ನಾನು ಪವಿತ್ರ ಗೌಡ,ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ life ನಲ್ಲಿ ಉಂಟಾದ problems ಇಂದ ನಾನು ಸಂಜಯ್ ಅವರಿಂದ Divorce ಪಡೆದಿದ್ದೇನೆ. ಇಲ್ಲಿಯ ವರಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!! ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ.plz Note this “I’m not here for any own personal needs and agenda”it’s all about pure love and care being for 10years it’s not at all easy ,,ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ ಈ ವಿಚಾರವಾಗಿ ವಿಜಯಲಕ್ಷ್ಮಿರವರೆ ನನಗೆ ಹಲವಾರು ಸಾರಿ call ಮಾಡಿ ನನ್ನ ಬಳಿ ಮಾತನಾಡಿದ್ದು ವಿಜಯಲಕ್ಷ್ಮಿರವರಿಗೆ ಯಾವುದೇ ರೀತಿಯ problems ಇಲ್ಲವೆಂದು ತಿಳಿಸಿರುತ್ತಾರೆ. (ಅದರ ಕೆಲವು proofs ಹಾಗೂ ನನ್ನ Divorce documents ಸಮಯ ಬಂದಾಗ ಹಂಚಿಕೊಳ್ಳುತ್ತೇನೆ).

ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ postಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ನನ್ನ teenage ಮಗಳಾದ ಖುಷಿ ಗೌಡಳ ಬಗ್ಗೆ Vijayalakshmi darshan ಯಂಬ instagram post ನಲ್ಲಿ ಬಹಳಷ್ಟು ಜನ bad language ಇಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೇ. ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ personal photos post ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ ಈ ಮೂಲಕ ನಾನು ಹೇಳುವುದೇನೆಂದರೆ ನನಗೂ legal action ತಗೊಳೋ ಹಕ್ಕು ಇದೆ ,ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ❗️ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ. I hope you alll know about problems between them, what and all he had gone through.Even before,I came in to his life,. plz Recalll it 🙏 @viji.darshan

SELF-RESPECT IS MORE IMPORTANT THEN ANYTHING ಎಂದು ಬರೆದುಕೊಂಡಿದ್ದಾರೆ.

Advertisement. Scroll to continue reading.

ಎಚ್ಚರಿಕೆ ನೀಡಿದ್ದ ವಿಜಯಲಕ್ಷ್ಮಿ ದರ್ಶನ್ :

ನಟಿ ಪವಿತ್ರ ಗೌಡ ಅವರು ತಾವು ಮತ್ತು ತಮ್ಮ ಪುತ್ರಿ ದರ್ಶನ್‌ ಅವರ ಜೊತೆ ಆತ್ಮೀಯವಾಗಿರುವ ಫೋಟೋ ಹಂಚಿಕೊಂಡು ಈ ಸಂಬಂಧಕ್ಕೆ 10 ವರ್ಷ ಎಂದು ಬರೆದುಕೊಂಡಿದ್ದರು. ಇದನ್ನು ನೋಡಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸಿಟ್ಟಾಗಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ವಿಜಯಲಕ್ಷ್ಮಿ ದರ್ಶನ್, ‘ಈ ಮಹಿಳೆಗೆ ಪ್ರಜ್ಞೆ ಇದ್ದಿದ್ದರೆ ಬೇರೊಬ್ಬರ ಗಂಡನ ಚಿತ್ರವನ್ನು ಪೋಸ್ಟ್ ಮಾಡುತ್ತಿರಲಿಲ್ಲ. ಈ ಕಾರ್ಯ ಆಕೆಯ ನೈತಿಕತೆ ಮತ್ತು ಆದರ್ಶ ಎಂಥಹದ್ದು ಎಂದು ತೋರಿಸುತ್ತದೆ. ವ್ಯಕ್ತಿಯೊಬ್ಬ ವಿವಾಹಿತನೆಂದು ತಿಳಿದಿದ್ದರೂ ಸಹ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಮತ್ತು ಲಾಭಕ್ಕಾಗಿ ಹತ್ತಿರವಾಗುತ್ತಾಳೆ. ಖುಷಿ ಗೌಡ, ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಎಂಬುದನ್ನು ಸ್ಪಷ್ಟವಾಗಿ ಸಾಬೀತು ಮಾಡುತ್ತವೆ ಈ ಚಿತ್ರಗಳು. ನಾನು ಸಾಮಾನ್ಯವಾಗಿ ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಲು ಸಾಮಾಜಿಕ ಮಾಧ್ಯಮವನ್ನು ಬಳಸುವುದಿಲ್ಲ. ಆದರೆ ಈಗ ನನ್ನ ಕುಟುಂಬದ ಹಿತದೃಷ್ಟಿಯಿಂದ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಇಡೀ ಸಮಾಜಕ್ಕೆ ತಪ್ಪು ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ. ಪವಿತ್ರಾ ಗೌಡ ಹಾಗೂ ಅವರ ಪತಿ ಸಂಜಯ್ ಸಿಂಗ್ರ ಹಳೆಯ ಚಿತ್ರಗಳನ್ನು ವಿಜಯಲಕ್ಷ್ಮಿ ದರ್ಶನ್ ತಮ್ಮ ಸಂದೇಶದೊಂದಿಗೆ ಹಂಚಿಕೊಂಡಿದ್ದರು.

ಇದೀಗ ಪವಿತ್ರ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ವಿಜಯಲಕ್ಷ್ಮಿ ಯಾವ ರೀತಿ ಪ್ರತಿಕ್ರಿಯೆ ನೀಡಬಹುದು ಎಂಬ ಕುತೂಹಲ ಹುಟ್ಟಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!