ಬಿಹಾರ: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ಎದ್ದಿದ್ದ ಎಲ್ಲಾ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಎನ್ ಡಿಎ ಜೊತೆಗೆ ಹೊಸ ಸರ್ಕಾರ ರಚಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಜೆಡಿಯು ಶಾಸಕರ ಸಭೆ ನಡೆಸಿದ ಬಳಿಕ ಹಿರಿಯ ಸಚಿವ ಬಿಜೇಂದ್ರ ಯಾದವ್ ಅವರೊಂದಿಗೆ ರಾಜಭವನಕ್ಕೆ ತೆರಳಿದ ನಿತೀಶ್ ಕುಮಾರ್, ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜ್ಯಪಾಲರು ರಾಜೀನಾಮೆ ಅಂಗೀಕರಿಸಿದ್ದು, ಹೊಸ ಸರ್ಕಾರ ರಚನೆಯಾಗುವವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ನಿತೀಶ್ ಕುಮಾರ್ ಅವರಿಗೆ ರಾಜ್ಯಪಾಲರು ಸೂಚಿಸಿರುವುದಾಗಿ ವರದಿಯಾಗಿದೆ.
Advertisement. Scroll to continue reading.