ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ವಾಹನವೊಂದು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಕಾಶ್ಮೀರ ಜಿಲ್ಲೆಯ ಬೋನಿಯಾರ್ ಪ್ರದೇಶದಲ್ಲಿ ಪ್ರಯಾಣಿಕರ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿದೆ.
ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಕಾಶ್ಮೀರದ ಹಿರಿಯ ಪೊಲೀಸ್ ಅಧೀಕ್ಷಕ(ಎಸ್ಎಸ್ಪಿ) ರವೀಂದರ್ ಪಾಲ್ ಸಿಂಗ್ ಅವರು ಪಿಟಿಐಗೆ ತಿಳಿಸಿದ್ದಾರೆ.
Advertisement. Scroll to continue reading.
ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ವೈದ್ಯಕೀಯ ಹಾಗೂ ಕಾನೂನು ವಿಧಿವಿಧಾನಗಳನ್ನು ನಡೆಸಲಾಗುತ್ತಿದೆ ಎಂದು ಎಸ್ಎಸ್ಪಿ ಹೇಳಿದ್ದಾರೆ.
ಗಾಯಾಳುಗಳನ್ನು ಬಾರಾಮುಲ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Advertisement. Scroll to continue reading.