Connect with us

Hi, what are you looking for?

Diksoochi News

ರಾಜ್ಯ

ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು : ಹೆಚ್.ಡಿ. ದೇವೇಗೌಡ ಅಸಮಾಧಾನ

1

ನವದೆಹಲಿ ಇತ್ತೀಚಿಗೆ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಮಂಡ್ಯ ತಾಲೂಕಿನ ಕೆರಗೋಡ ಗ್ರಾಮದ ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿದ್ದಕ್ಕೆ ಸ್ವತಃ ಅವರ ತಂದೆ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಶುಕ್ರವಾರ ಖಂಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು, ನಮ್ಮ ಪಕ್ಷದ ಶಾಲು ಹಾಕಬಹುದಿತ್ತು ಎಂದು ಹೇಳಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಕೇಸರಿ ಶಾಲು ಹಾಕಿರುವುದನ್ನು ಪರೋಕ್ಷವಾಗಿ ಖಂಡಿಸಿದ್ದಾರೆ.

ನಾಳೆ ನರೇಂದ್ರ ಮೋದಿ ಜೊತೆಗೆ ಹೋದಾಗಲೂ ನನ್ನ ಪಕ್ಷದ ಶಾಲು ಹಾಕುತ್ತೇನೆ. ನಾನು ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ ಎಂದಿರುವ ದೇವೇಗೌಡ, ಪ್ರತಿಭಟನೆಯ ವೇಳೆ ಯಾರೋ ಬಂದು ಕೇಸರಿ ಶಾಲು ಹಾಕಿರುತ್ತಾರೆ. ಆಯಾ ಸಂದರ್ಭಕ್ಕೆ ಹಾಕಿರುತ್ತಾರೆ. ಅದಕ್ಕೆ ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದಿದ್ದಾರೆ.

Advertisement. Scroll to continue reading.

ಬಿಜೆಪಿ ಜೊತೆಗಿನ ಮೈತ್ರಿಯ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಕೇಸರಿ ಶಾಲನ್ನು ಹೆಗಲಿಗೆ ಹಾಕಿಕೊಂಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!