ಬೆಂಗಳೂರು : ಹಿಂದೂ ಧರ್ಮವನ್ನು ಡೆಂಗ್ಯೂ, ಮಲೇರಿಯಾಗೆ ಹೋಲಿಸಿದ್ದ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಹಿರಿಯ ಪುತ್ರ ಉದಯನಿಧಿಗೆ ಆಘಾತವಾಗಿದೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಪರಮೇಶ್ ಎಂಬುವರು ಉದಯನಿಧಿ ವಿರುದ್ಧ ದೂರು ನೀಡಿದ್ದರು. ಇಂದು ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಮಾರ್ಚ್ 4ನೇ ತಾರೀಕು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ನ್ಯಾಯಾಧೀಶೆ ಜೆ. ಪ್ರೀತ್ ಅವರು ಈ ಮಹತ್ವದ ಆದೇಶ ಹೊರಡಿಸಿದ್ದಾರೆ.
ಏನಿದು ಪ್ರಕರಣ?
ಕಳೆದ ವರ್ಷ ತಮಿಳುನಾಡಿನಲ್ಲಿ ಸನಾತನ ಉನ್ಮೂಲನ್ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಪುತ್ರ ನಟ ಉದಯನಿಧಿ ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು. ಸನಾತನ ಧರ್ಮ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧ ಕೆಲವು ವಿಷಯಗಳಲ್ಲಿ ಮಾತ್ರ ವಿರೋಧಿಸಲು ಸಾಧ್ಯವೇ ಇಲ್ಲ, ಅದನ್ನು ನಿರ್ಮೂಲನೆ ಮಾಡಬೇಕು. ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.