ಬೆಂಗಳೂರು : ಸಿಲಿಕಾನ್ ಸಿಟಿಯ ರಿಂಗ್ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲು ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದ್ದು, ಫೆ .7ಕ್ಕೆ ಸಿಎಂ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಆಶೋಕ್ ಮಾಹಿತಿ ನೀಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನ ಬಳಿಕ ಅವರ ನೆನಪಿಗಾಗಿ ರಾಜ್ಯದ ಹಲವು ರಸ್ತೆ, ವೃತ್ತ, ಪಾರ್ಕ್‌ಗೆ ಅಪ್ಪು ಅವರ ಹೆಸರನ್ನು ಇಡಲಾಗುತ್ತಿದೆ. ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಪುನೀತ್ ಹೆಸರು ಇಡುವ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿದೆ. ಫೆಬ್ರವರಿ 7ರಂದು ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭವನ್ನು ಸಿಎಂ ಬಸವರಾಜ ಬೊಮ್ಮಾಯಿ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸುಮಾರು 12 ಕಿ.ಮೀ ಇರುವ ಈ ರಸ್ತೆಗೆ ಅಪ್ಪು ಹೆಸರಿಡಲಾಗಿದೆ. ಪುನೀತ್ ರಾಜ್ ಕುಮಾರ್ ಅವರು ನಮ್ಮ ಮಧ್ಯೆ ಇಲ್ಲ. ನಾನು ಇತ್ತೀಚಿಗೆ ಲಂಬಾಣಿ ತಾಂಡ್ಯಗಳಿಗೆ ಭೇಟಿ ಕೊಟ್ಟಿದ್ದೆ. ಹಳ್ಳಿ ಹಳ್ಳಿಗಳಲೂ ಪುನೀತ್ ರಾಜ್ ಕುಮಾರ್ ಅವರ ಫೋಟೊ ಇದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಧಾನಸೌಧದ ಮುಂಬಾಗ ಕರ್ನಾಟಕ ಪ್ರಶಸ್ತಿ ಕೊಟ್ಟು ಗೌರವಿಸಲಾಗಿದೆ. ನಮ್ಮ ಪುಣ್ಯ ಅಂದ್ಕೋತೀನಿ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಟ್ಟಾಗ ಮಳೆ ಬಂದಿತ್ತು. ಪುನೀತ್ ಅವರಿಗೂ ಕೊಟ್ಟಾಗಲೂ ಅಲ್ಲಿ ಮಳೆ ಬಂದು ನಮಗೆ ಆಶೀರ್ವಾದ ಮಾಡಿತು’ ಎಂದು ಹೇಳಿದರು.

ಈ. ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿ ಅನೇಕರು ಭಾಗಿ ಆಗುತ್ತಿದ್ದಾರೆ. ಪುನೀತ್ ಪತ್ನಿ ಅಶ್ವಿನಿಯವರು ಕೂಡ ಪಾಲ್ಗೊಳ್ಳುತ್ತಾರೆ’ ಎಂದು ಆರ್.ಅಶೋಕ್ ಹೇಳಿದ್ದಾರೆ.
