Connect with us

Hi, what are you looking for?

Diksoochi News

ಕ್ರೀಡೆ

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕೊಹ್ಲಿ – ಅನುಷ್ಕಾ ದಂಪತಿ; ಬಹಿರಂಗ ಪಡಿಸಿದ ಎಬಿಡಿ

2

ಕ್ರಿಕೆಟಿಗ ವಿರಾಟ್ ಕೊಹ್ಲಿ – ಅನುಷ್ಕಾ ಶರ್ಮ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಬಗ್ಗೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಹಿರಂಗ ಪಡಿಸಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ನಡೆಯುತ್ತಿರುವ 5 ಪಂದ್ಯಗಳ ಸರಣಿಯ ಮೊದಲ ಎರಡು ಟೆಸ್ಟ್‌ ಪಂದ್ಯದಿಂದ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣ ನೀಡಿ ಹೊರಗುಳಿದಿದ್ದರು. ಈ ವೇಳೆ ಕ್ರಿಕೆಟ್ ಅಭಿಮಾನಿಗಳು ಕೊಹ್ಲಿಯನ್ನು ಟೀಕಿಸಿದ್ದರು. ಇನ್ನು ಕೆಲವರು ಅವರ ಆರೋಗ್ಯವಾಗಿಲ್ಲ ಎಂದು ವದಂತಿ ಹಬ್ಬಿಸಿದ್ದರು.

ಈ ಬಗ್ಗೆ ಮಾತನಾಡಿದ ಎಬಿಡಿ, ಕೊಹ್ಲಿ ಟೆಸ್ಟ್ ಪಂದ್ಯದಿಂದ ಹೊರಗುಳಿದ ಕಾರಣವನ್ನು ತಿಳಿಸಿದ್ದಾರೆ.

Advertisement. Scroll to continue reading.

ಯೂಟ್ಯೂಬ್ ಲೈವ್‌ನಲ್ಲಿ ಮಾತನಾಡಿದ ಡಿವಿಲಿಯರ್ಸ್, ನಾನು ವಿರಾಟ್ ಕೊಹ್ಲಿ ಅವರನ್ನು ಸಂಪರ್ಕಿಸಿದ್ದೇನೆ‌. ಅವರು ಆರಾಮವಾಗಿದ್ದಾರೆ ಮತ್ತು ಅವರ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ. ಸದ್ಯ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಕೊಹ್ಲಿ ಅಭಿಮಾನಿಗಳಿಗೆ ಸಿಹಿಸುದ್ದಿ ತಿಳಿಸಿದ್ದಾರೆ.

ಇದೇ ವೇಳೆ ಸೂಪರ್‌ಸ್ಟಾರ್ ಕ್ರಿಕೆಟಿಗನು ತನ್ನ ಜೀವನದ ಈ ಹಂತದಲ್ಲಿ ತನ್ನ ಕುಟುಂಬಕ್ಕೆ ನೀಡಿರುವ ಆದ್ಯತೆ ಬಗ್ಗೆ ಶ್ಲಾಘಿಸಿದ್ದಾರೆ.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಈ ವರ್ಷದ ಜನವರಿಯಲ್ಲಿ ಈ ಸ್ಟಾರ್ ದಂಪತಿ ತಮ್ಮ ಪುತ್ರಿ ವಾಮಿಕಾ ಅವರ ಮೂರನೇ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!