ಮುಂಜಾನೆ ಟರ್ಕಿ ಮತ್ತು ಸಿರಿಯಾದಲ್ಲಿ ಅತ್ಯಂತ ಪ್ರಬಲ ಭೂಕಂಪ ಸಂಭವಿಸಿದೆ. 1,300ಕ್ಕೂ ಹೆಚ್ಚು ಜನರು ನಿದ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತದಲ್ಲಿ 5000ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. 3 ಸಾವಿರ ಮನೆಗಳು ನಾಶವಾಗಿವೆ. ಮೊದಲನೆಯ ಪ್ರಬಲ ಭೂಕಂಪ ನಡೆದ ಕೆಲವೇ ಗಂಟೆಗಳಲ್ಲಿ ಮತ್ತೊಮ್ಮೆ ಭೂಮಿ ಬಲವಾಗಿ ಕಂಪಿಸಿದ್ದು, ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮುಖ್ಯಸ್ಥ ರಯೀದ್ ಅಹ್ಮದ್ ಅವರು ಸರ್ಕಾರಿ ಪರ ರೇಡಿಯೋಗೆ ಇದು ‘ಕೇಂದ್ರದ ಇತಿಹಾಸದಲ್ಲಿ ದಾಖಲಾದ ಅತಿದೊಡ್ಡ ಭೂಕಂಪ’ ಎಂದು ಹೇಳಿದ್ದಾರೆ.
ಇತ್ತೀಚಿನ ಎಣಿಕೆಯ ಪ್ರಕಾರ, ಸಿರಿಯಾದ ಸರ್ಕಾರಿ ನಿಯಂತ್ರಿತ ಭಾಗಗಳಲ್ಲಿ ಕನಿಷ್ಠ 326 ಜನರು ಸಾವನ್ನಪ್ಪಿದ್ದಾರೆ. ಇನ್ನು ಟರ್ಕಿಯಲ್ಲಿ ಕನಿಷ್ಠ 912 ಜನರು ಸಾವನ್ನಪ್ಪಿದ್ದಾರೆ ಎಂದು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಹೇಳಿದ್ದಾರೆ.
Advertisement. Scroll to continue reading.
