Connect with us

Hi, what are you looking for?

Diksoochi News

ಕ್ರೀಡೆ

ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್; 171 ರನ್ ಮುನ್ನಡೆ ಸಾಧಿಸಿದ ಭಾರತ

0

ವಿಶಾಖಪಟ್ಟಣಂ: ಭಾರತ vs ಇಂಗ್ಲೆಂಡ್ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯವು ವಿಶಾಖಪಟ್ಟಣಂನ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಪಂದ್ಯದ ಎರಡನೇ ದಿನವಾದ ಇಂದು ಇಂಗ್ಲೆಂಡ್‌ಗೆ ಹಿನ್ನಡೆಯಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡದ 253 ರನ್ ಗಳಿಗೆ ಆಲೌಟ್ ಆಗಿದ್ದು, ಭಾರತ 171 ರನ್ ಗಳ ಮುನ್ನಡೆ ಸಾಧಿಸಿದೆ.

ಎರಡನೇ ದಿನದಾಟದ ಅಂತ್ಯದ ವೇಳೆಗೆ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 5 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 28 ರನ್ ಗಳಿಸಿದೆ.

ಯಶಸ್ವಿ ಜೈಸ್ವಾಲ್ ಅಜೇಯ 15 ರನ್ ಮತ್ತು ನಾಯಕ ರೋಹಿತ್ ಶರ್ಮಾ 13 ರನ್ ಗಳಿಸಿ ಅಜೇಯರಾಗಿದ್ದಾರೆ.

ಇದಕ್ಕೂ ಮೊದಲು ಭಾರತ ನೀಡಿದ 396 ರನ್‌ಗಳಿಗೆ ಉತ್ತರವಾಗಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ 253 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತ್ತು. ಮೊದಲ ಇನಿಂಗ್ಸ್‌ನಲ್ಲಿ ಭಾರತ 143 ರನ್‌ಗಳ ಮುನ್ನಡೆ ಸಾಧಿಸಿತ್ತು.

Advertisement. Scroll to continue reading.

ಜಸ್ಪ್ರೀತ್ ಬುಮ್ರಾ ಮಾರಕ ದಾಳಿ ಭಾರತಕ್ಕೆ ವರವಾಗಿ ಪರಿಣಮಿಸಿತು. ಅವರು 45 ರನ್ ನೀಡಿ, 6 ವಿಕೆಟ್ ಕಬಳಿಸಿದರು. ಕುಲದೀಪ್ ಯಾದವ್ 3 ಮತ್ತು ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!