Connect with us

Hi, what are you looking for?

ಕರಾವಳಿ

ಮಂಗಳೂರು: ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ; ಎಫ್‌ಐಆರ್ ದಾಖಲು

2

ಮಂಗಳೂರು : ನಗರದ ಹೊರವಲಯ ಖಾಸಗಿ ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಡಳಿತ ಮಂಡಳಿ ವಿರುದ್ಧ ಕದ್ರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ಜಗದೀಶ್ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಯಾವುದೋ ಸಂಶಯಾಸ್ಪದ ವಿಷಪೂರಿತ ಆಹಾರ ನೀಡಲಾಗಿದೆ. ಆಹಾರ ತಯಾರಿಗೆ ಮತ್ತು ಪೂರೈಕೆಯಲ್ಲಿ ಶುಚಿತ್ವ ಕಾಪಾಡದೆ ನಿರ್ಲಕ್ಷ್ಯ ವಹಿಸಲಾಗಿದೆ. ಆಸ್ವತ್ರೆಗೆ ದಾಖಲಿಸುವ ಸಂದರ್ಭ ಸೂಕ್ತ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ವರದಿ ಮಾಡದೆ ಲೋಪ ಎಸಗಿರುವುದು ಕಂಡು ಬಂದಿದೆ ಎಂಬ ಅಂಶಗಳನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

Advertisement. Scroll to continue reading.

ನಗರದ ಖಾಸಗಿ ನರ್ಸಿಂಗ್‌ ಕಾಲೇಜಿಗೆ ಸೇರಿದ ಶಕ್ತಿನಗರದಲ್ಲಿರುವ ಹಾಸ್ಟೆಲ್‌ನಲ್ಲಿ ಅವಘಡ ಸಂಭವಿಸಿದೆ. ಭಾನುವಾರ ರಾತ್ರಿ ಸೇವಿಸಿದ ಆಹಾರ ಕಲುಶಿತವಾಗಿರುವ ಸಾಧ್ಯತೆ ಇದ್ದು, ಭಾನುವಾರ ಮುಂಜಾನೆಯಿಂದಲೇ ಹಲವು ವಿದ್ಯಾರ್ಥಿಗಳಲ್ಲಿವಾಂತಿ, ತಲೆ ಸುತ್ತುವಿಕೆ ಕಂಡು ಬಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ ಹಾಗೂ ರಾತ್ರಿ ಮತ್ತಷ್ಟು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದರು.

ಈ ನಡುವೆ ಹಲವು ವಿದ್ಯಾರ್ಥಿಗಳಲ್ಲಿಗಂಭೀರ ಆರೋಗ್ಯ ಸಮಸ್ಯೆ ಕಂಡು ಬಂದಿದ್ದರಿಂದ ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!