ನವದೆಹಲಿ: ಇಂಗ್ಲೆಂಡ್ ತಂಡದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ. ಈ ಮೂಲಕ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಮೇಲೇರಿದೆ.
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ 106 ರನ್ ಗಳಿಂದ ಭಾರತ ಗೆದ್ದಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.
ಈ ಹಿಂದೆ ಮೊದಲ ಟೆಸ್ಟ್ ನಲ್ಲಿ ಸೋತು ಅಂಕ ಕಳೆದುಕೊಂಡು ಕುಸಿತ ಕಂಡಿದ್ದ ಟೀಮ್ ಇಂಡಿಯಾ ದ್ವಿತೀಯ ಪಂದ್ಯದಲ್ಲಿ ಆಂಗ್ಲರ ವಿರುದ್ಧ ಗೆದ್ದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ ಟೇಬಲ್ ನಲ್ಲೂ ಮೇಲೇರಿದೆ.
ಶೇ.52.77 ಗೆಲುವಿನ ಪ್ರಮಾಣದೊಂದಿಗೆ ಭಾರತ ತಂಡ ಇದೀಗ 2ನೇ ಸ್ಥಾನಕ್ಕೆ ಬಡ್ತಿ ಪಡೆದಿದೆ. 10 ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯಾ 6 ಜಯ ಹಾಗೂ 1 ಡ್ರಾನೊಂದಿಗೆ ಆಸ್ಟ್ರೇಲಿಯಾ ತಂಡ ಒಟ್ಟು 55% ಗೆಲುವಿನ ಶೇಕಡಾವಾರು ಹೊಂದು ಮೂಲಕ ಅಗ್ರಸ್ಥಾನದಲ್ಲಿ ಮುಂದುವರೆದಿದೆ.
ಹಾಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಇದುವರೆಗೆ 6 ಪಂದ್ಯಗಳನ್ನಾಡಿರುವ ಭಾರತ ತಂಡವು 3 ಗೆಲುವು ಹಾಗೂ 1 ಡ್ರಾನೊಂದಿಗೆ 52.77% ಗೆಲುವಿನ ಶೇಕಡಾವಾರು ಹೊಂದಿದ್ದು, ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ದಕ್ಷಿಣ ಆಫ್ರಿಕಾ (50%) ಮೂರನೇ ಸ್ಥಾನದಲ್ಲಿದ್ದು, ನ್ಯೂಜಿಲೆಂಡ್ (50%) ಹಾಗೂ ಬಾಂಗ್ಲಾದೇಶ್ (50%) ತಂಡಗಳು ಕ್ರಮವಾಗಿ 4ನೇ ಮತ್ತು 5ನೇ ಸ್ಥಾನಗಳಲ್ಲಿದೆ.
ಇನ್ನು ಭಾರತದ ವಿರುದ್ಧ ಸೋತಿರುವ ಇಂಗ್ಲೆಂಡ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದಿದ್ದು, ಇದುವರೆಗೆ ಆಡಿದ 7 ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ 3 ಗೆಲುವು ಹಾಗೂ 1 ಡ್ರಾನೊಂದಿಗೆ 33.33% ಗೆಲುವಿನ ಶೇಕಡಾವಾರು ಹೊಂದಿದೆ.