ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಐಷಾರಾಮಿ ಸೂರ್ಯಗಢ ಪ್ಯಾಲೇಸ್ ಹೋಟೆಲ್ ನಲ್ಲಿ ನಡೆದ ಬಾಲಿವುಡ್ ಲವ್ ಬರ್ಡ್ಸ್ ಮದುವೆ ಅದ್ಧೂರಿಯಾಗಿ ನಡೆದಿದೆ.
ಆಪ್ತರು ಮತ್ತು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ – ಕಿಯಾರಾ ಅಡ್ವಾಣಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಬಾಲಿವುಡ್ ಸೆಲೆಬ್ರೆಟಿಗಳು ಸಹ ಭಾಗಿಯಾಗಿದ್ರು.
Advertisement. Scroll to continue reading.

ಮದುವೆ ಫೋಟೋಗಳನ್ನು ನಟಿ ಕಿಯಾರಾ ಅಡ್ವಾಣಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಫೋಟೋಗಳನ್ನು ಹಂಚಿಕೊಂಡಿರುವ ಕಿಯಾರಾ, ಅಬ್ ಹುಮಾರಿ ಪರ್ಮನೆಂಟ್ ಬುಕಿಂಗ್ ಹೋ ಗಯಿ ಹೈ , “ನಮ್ಮ ಮುಂದಿನ ಪ್ರಯಾಣದಲ್ಲಿ ನಾವು ನಿಮ್ಮ ಆಶೀರ್ವಾದ ಮತ್ತು ಪ್ರೀತಿಯನ್ನು ಬಯಸುತ್ತೇವೆ ಎಂದು ಕಿಯಾರಾ ಅಡ್ವಾಣಿ ಬರೆದುಕೊಂಡಿದ್ದಾರೆ.
Advertisement. Scroll to continue reading.

In this article:bollywood, Diksoochi news, diksoochi Tv, diksoochi udupi, kiara advani, marriage, siddarth malhothra

Click to comment