ನವದೆಹಲಿ : RBI ರೆಪೊ ದರ 6 ನೇ ಬಾರಿಗೆ ಹೆಚ್ಚಳ ಮಾಡಿದೆ. ರೆಪೋ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಅಂದರೆ ಶೇ. 6. 5 ಕ್ಕೆ ಹೆಚ್ಚಿಸಿದೆ.
MPC ಬಹುಮತದಿಂದ ಪಾಲಿಸಿ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ ತಕ್ಷಣವೇ ಜಾರಿಗೆ ತರಲು ನಿರ್ಧರಿಸಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿ ದಾಸ್ ತಿಳಿಸಿದ್ದಾರೆ.
ಭಾರತೀಯ ಆರ್ಥಿಕತೆಯು ಚೇತರಿಸಿಕೊಳ್ಳುತ್ತಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದು, 2023-24 ರ ನೈಜ GDP ಬೆಳವಣಿಗೆಯನ್ನು 6.4% ಎಂದು ನಿರೀಕ್ಷಿಸಲಾಗಿದೆ ಎಂದು ಬುಧವಾರ ನಡೆದ ಆರ್‌ಬಿಐ ಸುದ್ದಿಗೋಷ್ಠಿಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಮಾಹಿತಿ ನೀಡಿದ್ದಾರೆ.

ಉದಯೋನ್ಮುಖ ಮಾರುಕಟ್ಟೆ ಆರ್ಥಿಕತೆಗಳು ತೀಕ್ಷ್ಣವಾದ ವ್ಯಾಪಾರ-ವಹಿವಾಟುಗಳನ್ನು ಎದುರಿಸುತ್ತಿವೆ. ಜಾಗತಿಕ ಸಹಕಾರ ತುರ್ತು ಅಗತ್ಯ ಎಂದು ಇದೇ ವೇಳೆ ಅವರು ತಿಳಿಸಿದ್ದಾರೆ.
ಫೆಬ್ರವರಿ 6ರಿಂದ 8ರವರೆಗೆ ಮಾನೆಟರಿ ಪಾಲಿಸಿ ಕಮೀಟಿ (ಎಂಪಿಸಿ) ಸಭೆ ನಡೆದಿದ್ದು ಈ ಸಭೆಯ ಅಂತ್ಯದಲ್ಲಿ ಅಂದರೆ ಫೆಬ್ರವರಿ 8ರಂದು ಆರ್‌ಬಿಐ ರೆಪೋ ದರ ಪರಿಷ್ಕರಣೆ ಮಾಡಿದೆ.
