ಫುಟ್ ಪಾತಿನಲ್ಲಿ ಏಳು ಮಂದಿ ಮೇಲೆ ಬಸ್ ಹರಿದು, ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಉಳಿದವರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಬುದ್ಧ ನಗರ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಸಂಕೇಶ್ವರ್ ಕುಮಾರ್ ದಾಸ್ (25), ಮೊಹರಿ ಕುಮಾರ್ (22), ಸತೀಶ್ (25), ಮತ್ತು ಆಜಾದ್ (34) ಎಂದು ಗುರುತಿಸಲಾಗಿದೆ.
ಈ ಕುರಿತಂತೆ ಎಡಿಸಿಪಿ (ಸೆಂಟ್ರಲ್ ನೋಯ್ಡಾ) ವಿಶಾಲ್ ಪಾಂಡೆ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಹೀರೋ ಮೋಟಾರ್ಸ್ ಕಂಪನಿಯ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೊಬ್ಬರು ವೈದ್ಯಕೀಯ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.
Advertisement. Scroll to continue reading.

ಬಸ್‌ನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿ ಚಾಲಕನಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಚಾಲಕ ಇನ್ನೂ ತಲೆಮರೆಸಿಕೊಂಡಿದ್ದು, ಆತನನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
Advertisement. Scroll to continue reading.

In this article:accident, Buddha Nagar, Diksoochi news, diksoochi Tv, diksoochi udupi, uttara Pradesh

Click to comment