Connect with us

Hi, what are you looking for?

Diksoochi News

ರಾಜ್ಯ

ಸಾರಿಗೆ ಸಚಿವ ರಾಮಲಿಂಗರೆಡ್ಡಿಗೆ ಜಾಮೀನು ರಹಿತ ವಾರಂಟ್‌ ಜಾರಿ

1

ಬೆಂಗಳೂರು : ಮೇಕೆದಾಟು ಪಾದಯಾತ್ರೆ ವೇಳೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ, ಕೋರ್ಟ್‌ಗೆ ನಿರಂತರವಾಗಿ ಅವರಯ ಗೈರಾದ ಹಿನ್ನಲೆಯಲ್ಲಿ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆಯನ್ನು ನಡೆಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿಯೇ ಪಾದಯಾತ್ರೆ ಮಾಡಿದ್ದಂತ ಕಾಂಗ್ರೆಸ್ ನಾಯಕರ ವಿರುದ್ಧ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿತ್ತು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧವೂ ದೂರು ದಾಖಲಾಗಿತ್ತು. ಈ ಬಗ್ಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್‌ಗೆ ಅವರು ಹಾಜರಾಗದೇ ನಿರಂತರವಾಗಿ ಗೈರಾಗಿದ್ದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಬಳಿಕ ಕೋರ್ಟ್ ನಿಂದ ಸಮನ್ಸ್ ಜಾರಿಯಾಗಿತ್ತು. ಆದರೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೋರ್ಟ್ ವಿಚಾರಣೆ ಹಾಜರಾಗಿರಲಿಲ್ಲ.

Advertisement. Scroll to continue reading.

ಹೀಗಾಗಿ ರಾಮಲಿಂಗಾರೆಡ್ಡಿ ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶ ಜೆ.ಪ್ರೀತಂ ಅವರು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಆದೇಶಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!