ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಅಪ್ಲೋಡ್ ಮಾಡುತ್ತಿರುವ ಕಂಟೆಂಟ್ ಕ್ರಿಯೆಟರ್ಸ್‌ಗೆ ಶುಭ ಸುದ್ದಿ ಸಿಕ್ಕಿದೆ. ಇದೀಗ ಕಂಟೆಂಟ್ ಕ್ರಿಯೆಟರ್ಸ್‌ಗೆ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಈಗ ಸೋಶಿಯಲ್ ಮೀಡಿಯಾದಲ್ಲಿ ಈಗ ಹವಾ ಸೃಷ್ಠಿಸೋರಿಗಂತೂ ಕೊರತೆ ಇಲ್ಲ. ಸಣ್ಣ ಮಕ್ಕಳಿಂದ ಹಿಡಿದು ಎಲ್ಲರೂ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುವವರೇ. ಅಂತಹ ಪ್ರಭಾವಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಿದೆ.
ದೇಶದ ವಿವಿಧ ಭಾಷೆ ಮತ್ತು ವರ್ಗಗಳನ್ನು ಗುರುತಿಸುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ನೀಡುವ ಮಾದರಿಯಲ್ಲಿ ಸುಮಾರು 20 ವಿಭಾಗಗಳ ಅಡಿಯಲ್ಲಿ ಪ್ರಶಸ್ತಿಗಳನ್ನು ನೀಡಲು ಮುಂದಾಗಿದೆ.
ಯೂಟ್ಯೂಬ್, ಇನ್‌ಸ್ಟಾಗ್ರಾಮ್ ನಂತಹ ಸಾಮಾಜಿಕ ಜಾಲತಾಣದಲ್ಲಿ ತೊಡಗಿಕೊಂಡಿರುವ ಪ್ರಭಾವಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತೆ. 20 ವರ್ಗಗಳಲ್ಲಿ ದೇಶದ ಶಕ್ತಿ ಮತ್ತು ಸಂಸ್ಕೃತಿಯನ್ನು ತೋರಿಸಿದವರಿಗೆ ಒಂದು ಪ್ರಶಸ್ತಿಯನ್ನು ನೀಡಲಾಗುತ್ತೆ. ಜೊತೆಗೆ ಗ್ರೀನ್ ಚಾಂಪಿಯನ್ಸ್, ಸ್ವಚ್ಛತಾ ರಾಯಭಾರಿಗಳು ಮತ್ತು ಟೆಕ್ ಕ್ರಿಯೇಟರ್ಸ್ ಎಂಬ ವಿವಿಧ ವಿಭಾಗದಲ್ಲಿ ಪ್ರಶಸ್ತಿಗಳು ಇರಲಿವೆ.