Connect with us

Hi, what are you looking for?

Diksoochi News

ಕರಾವಳಿ

ಕಾರ್ಕಳ : ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

1

ಕಾರ್ಕಳ : ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಿಯಾರು ಗ್ರಾಮದ ಬೆರ್ಮಲ್ಲಿ ಮನೆ ಎಂಬಲ್ಲಿ ಶನಿವಾರ ನಡೆದಿದೆ.

ಮಿಯ್ಯಾರು ಗ್ರಾಮದ ನಿವಾಸಿ ಅಶೋಕ (53) ಮೃತಪಟ್ಟವರು.

Advertisement. Scroll to continue reading.

ಅಶೋಕ, ಸಂದೇಶ್ ಎಂಬುವರ ಮನೆಗೆ ತೆಂಗಿನಕಾಯಿ ಕೀಳಲು ಹೋಗಿದ್ದು, ತೆಂಗಿನಕಾಯಿ ಕೀಳುತ್ತಿರುವಾಗ ಬೆಳಗ್ಗೆ 9:30 ಗಂಟೆಗೆ ತೆಂಗಿನ ಮರದಿಂದ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಾಯಗೊಂಡಿದ್ದು, ಕೂಡಲೇ ಅವರನ್ನು ಚಿಕಿತ್ಸೆಗೆ ಕಾರ್ಕಳ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಅಲ್ಲಿನ ವೈದ್ಯಾಧಿಕಾರಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಲಾಕ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು, ಅಲ್ಲಿಂದ ಮಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಅಶೋಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!