ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ‘ಕೈ’ ಬಿಟ್ಟು ಮಂಗಳವಾರ ಮುಂಬೈನಲ್ಲಿ ‘ಕಮಲ’ ಪಾಳಯ ಸೇರಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಈ ಹಿಂದೆ ದಕ್ಷಿಣ ಮುಂಬೈನ ಮಾಜಿ ಸಂಸದ ಮಿಲಿಂದ್ ದಿಯೋರಾ ಮತ್ತು ಮಾಜಿ ಶಾಸಕ ಬಾಬಾ ಸಿದ್ದಿಕಿ ಬೈ ಹೇಳಿದ್ದರು. ಇದೀಗ ಮಹಾರಾಷ್ಟ್ರದಲ್ಲಿ ಚವಾಣ್ ಕಾಂಗ್ರೆಸ್ ತೊರೆದಿದ್ದಾರೆ.
ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.
ಇದಕ್ಕೂ ಮುನ್ನ ಬಿಜೆಪಿ ಸೇರುವ ನಿರ್ಧಾರದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್, ಇಂದು ಇದು ನನ್ನ ರಾಜಕೀಯ ವೃತ್ತಿಜೀವನದ ಹೊಸ ಆರಂಭ. ನಾನು ಇಂದು ಅವರ ಕಚೇರಿಯಲ್ಲಿ ಔಪಚಾರಿಕವಾಗಿ ಬಿಜೆಪಿಗೆ ಸೇರುತ್ತಿದ್ದೇನೆ. ಮಹಾರಾಷ್ಟ್ರದ ರಚನಾತ್ಮಕ ಅಭಿವೃದ್ಧಿಗಾಗಿ ನಾವು ಕೆಲಸ ಮಾಡುತ್ತೇವೆ ಎಂದು ನಾನು ಭಾವಿಸುತ್ತೇನೆ” ಎಂದರು.
ಚವಾಣ್ ಅವರು ಡಿಸೆಂಬರ್ 2008 ರಿಂದ ನವೆಂಬರ್ 2010 ರವರೆಗೆ ಎರಡು ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದರು.