Connect with us

Hi, what are you looking for?

Diksoochi News

ರಾಜ್ಯ

ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಆಸ್ಪತ್ರೆಗೆ ದಾಖಲು

0

ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ಬೆಳಿಗ್ಗೆ ದೇವೇಗೌಡರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಅಲ್ಲಿನ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ದಾಖಲಿಸಿಕೊಂಡು ನಿಗಾವಹಿಸಿದ್ದಾರೆ.

Advertisement. Scroll to continue reading.

ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ಮಣಿಪಾಲ್‌ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!