Connect with us

Hi, what are you looking for?

Diksoochi News

ರಾಜ್ಯ

‘ಕರಿಮಣಿ ಮಾಲೀಕ ನೀನಲ್ಲ’ ಎಂದು ರೀಲ್ಸ್ ಮಾಡಿದ ಪತ್ನಿ; ನೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

0

ಚಾಮರಾಜನಗರ : ಸದ್ಯ ಎಲ್ಲರ ಬಾಯಲ್ಲೂ ‘ಕರಿಮಣಿ ಮಾಲೀಕ’ ದ್ದೇ ಗುನುಗು. ಸೋಶಿಯಲ್ ಮೀಡಿಯಾದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯದ ‘ಉಪೇಂದ್ರ’ ಚಿತ್ರದ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡು ಸಕತ್ ಸದ್ದು ಮಾಡುತ್ತಿರುವುದೇ ಇದಕ್ಕೆ ಕಾರಣ. ಈ ಹಾಡು ಟ್ರೋಲ್ ಆಗುತ್ತಿದೆ. ಹಲವರು ರೀಲ್ಸ್‌ ಮಾಡುತ್ತಿದ್ದಾರೆ.

ಈ ಹಾಡಿನಿಂದ ದುರಂತವೊಂದು ನಡೆದಿದೆ. ಹೌದು, ಈ ಹಾಡಿಗೆ ಮಹಿಳೆಯೊಬ್ಬರು ಇನ್‌ಸ್ಟಾಗ್ರಾಮ್ ರೀಲ್ಸ್ ಮಾಡಿದ್ದು, ಇದರಿಂದ ಬೇಸರಗೊಂಡು ಆಕೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುರುವಾರ ಚಾಮರಾಜನಗರದ ಹನೂರು ಪ್ರದೇಶದಲ್ಲಿ ನಡೆದಿದೆ.

ಪಿ.ಜಿ‌.ಪಾಳ್ಯ ಗ್ರಾಮದ 34 ವರ್ಷದ ಕುಮಾರ್ ಇಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement. Scroll to continue reading.

ಕೂಲಿ ಕೆಲಸ ಮಾಡುತ್ತಿದ್ದ ಕುಮಾರ್, ತನ್ನ ಹೆಂಡತಿ ನಿರಂತರವಾಗಿ ಸಾಮಾಜಿಕ ಮಾಧ್ಯಮಕ್ಕೆ ಅಂಟಿಕೊಂಡಿರುವುದು ಇಷ್ಟವಾಗುತ್ತಿರಲಿಲ್ಲ. ಅವರ ಪತ್ನಿ ಆಗಾಗ್ಗೆ ರೀಲ್ಸ್ ಗಳನ್ನು ಮಾಡಿ ಅಪ್‌ಲೋಡ್ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಪ್ರಾಥಮಿಕ ವಿಚಾರಣೆಯ ಪ್ರಕಾರ, ಕುಮಾರ್ ತನ್ನ ಹೆಂಡತಿಯ ರೀಲ್ಸ್ ಗೀಳನ್ನು ವಿರೋಧಿಸಿದ್ದರು. ಆದರೆ ಕುಮಾರ್ ಅವರ ಪತ್ನಿ ಇತ್ತೀಚಿಗೆ ತಮ್ಮ ಸೋದರಮಾವ ಹಾಗೂ ಸಹೋದರಿ ಜತೆಗೆ ಸೇರಿ ಓ ನಲ್ಲ, ನೀನಲ್ಲ.. ಕರಿಮಣಿ ಮಾಲೀಕ ನೀನಲ್ಲ ಎಂಬ ಸಾಂಗ್‌ಗೆ ರೀಲ್ಸ್‌ ಮಾಡಿ, ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದರು. ಈ ರೀಲ್ಸ್‌ ವಿಚಾರಕ್ಕೆ ಊರಲ್ಲಿ ಕುಮಾರ್‌ನನ್ನು ಕೆಲವರು ಕಾಲೆಳೆದು ಯಾರಪ್ಪಾ ಕರಿಮಣಿ ಮಾಲೀಕ ಎಂದು ಹೀಯಾಳಿಸಿದ್ದರಿಂದ ಮನನೊಂದು ಕುಮಾರ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರೀಲ್ಸ್ ವಿಚಾರ ದಂಪತಿಗಳ ನಡುವೆ ಆಗಾಗ್ಗೆ ಜಗಳಕ್ಕೆ ಕಾರಣವಾಗುತ್ತಿತ್ತು. ಈ ವಿಚಾರ ತೀವ್ರ ಸ್ವರೂಪಕ್ಕೆ ಹೋಗಿದ್ದು, ಕುಮಾರ್ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!