ಉಡುಪಿ : ಪುತ್ತೂರು ಗ್ರಾಮದ ನಿಟ್ಟೂರಿನ ನಿವಾಸಿ ವಿನೋದ ಕುಚಲ (19) ಎಂಬ ಯುವಕನು ಫೆಬ್ರವರಿ 8 ರಂದು ಮನೆಯಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.
168 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Advertisement. Scroll to continue reading.
Advertisement. Scroll to continue reading.