ಬೆಂಗಳೂರು: ರಾಜ್ಯ ಬಜೆಟ್ 2024-25 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 15ನೇ ಬಾರಿ ಬಜೆಟ್ ಮಂಡನೆ ಮಾಡಿದರು.
ಈ ಬಾರಿ 3, 71, 383 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ ಮೀಸಲು ಇಡಲಾಗುವುದು. 1.33 ಕೋಟಿ ಮಹಿಳೆಯರಿಗೆ ಯೋಜನೆಯಿಂದ ಲಾಭವಾಗಲಿದೆ. ಜನವರಿ 31ರವರೆಗೆ 1.27 ಕೋಟಿ ಮಹಿಳೆಯರ ನೋಂದಣಿಯಾಗಿದೆ, 11726 ಕೋಟಿ ನೇರವಾಗಿ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಅಂಗನವಾಡಿ ಕಾರ್ಯಕರ್ತರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ನೀಡಲಾಗುವುದು ಎಂದು ಘೋಷಿಸಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಟಿ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಹೈಟೆಕ್ ಮೀನು ಮಾರುಕಟ್ಟೆ, ಆಸ್ಪತ್ರೆ ನಿರ್ಮಾಣ
ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು.
ಮೀನುಗಾರಿಕೆ ಕ್ಷೇತ್ರಕ್ಕೆ ಬಜೆಟ್ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಣೆ ಮಾಡಲಾಗಿದೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಸಿದ್ದರಾಮಯ್ಯ ಅವರು ಹೇಳಿದರು.
ತಾಲೂಕು ಆಸ್ಪತ್ರೆಯಿಲ್ಲದ ಆನೇಕಲ್ ನೆಲಮಂಗಲ ಹೊಸಕೋಟೆ ಶೃಂಗೇರಿ ಶಿರಹಟ್ಟಿ ತಾಲೂಕಿಗಳಲ್ಲಿ ೨೮೦ ಕೋಟಿ ವೆಚ್ಚದಲ್ಲಿ ೧೦೦ ಹಾಸಿಗೆ ಆಸ್ಪತ್ರೆ ನಿರ್ಮಾಣ. ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆ ಆವರಣದಲ್ಕಿ ತಾಯಿ ಮತ್ತು ಮಕ್ಕಳ ಮೂಲಸೌಕರ್ಯ ಕಾಮಗಾರಿಗಳನ್ನ ೧೫೦ ಕೋಟಿ ವೆಚ್ಚದಲ್ಲಿ ಪ್ರಾರಂಭ. ಕಲ್ಯಾಣ ಕರ್ನಾಟಕ ಭಾಗದಲ್ಲಿ ೪೬ ಹೊಸ ಪ್ರಾಥಮಿಕ ಕೇಂದ್ರಗಳ ೨೨೧ ಕೋಟಿಗಳ ವೆಚ್ಚದಲ್ಲಿ ಸ್ಥಾಪನೆ ಉದ್ದೇಶ ಹೊಂದಿದೆ.
ಬ್ರಿಡ್ಜ್, ವಸತಿ ಸಂಕೀರ್ಣ
ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್ ಅನ್ನು ಲೋಕೋಪಯೋಗಿ 3 ಇಲಾಖೆ ವತಿಯಿಂದ ಕೈಗೆತ್ತಿಕೊಳ್ಳಲಾಗುವುದು. 158 ಕೋಟಿ ರೂ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.
ತಿರುಮಲ, ಶ್ರೀಶೈಲ, ವಾರಣಾಸಿ ಮತ್ತು ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತಾಧಿಗಳ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಾಣ.
ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ವಲಸೆ ಹೋದ ಸಂದರ್ಭದಲ್ಲಿ ಅವರಿಗೆ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲು ಆಯ್ದ 10 ಜಿಲ್ಲೆಗಳಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ನಿರ್ಮಿಸಲಾಗುವುದು.
ಪತ್ರಕರ್ತರಿಗೆ ಉಚಿತ ಬಸ್ ಪಾಸ್ :
ಸುಳ್ಳು ಸುದ್ದಿ ತಡೆಗಟ್ಟಲು ಐಟಿಬಿಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ಶೋಧನಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು. ಅಲ್ಲದೆ ಡೀಪ್ ಫೇಕ್ ಹಾಗೂ ಸೈಬರ್ ಕ್ರೈಂ ತಡೆಗೆ 43 ಹೊಸ ಪೊಲೀಸ್ ಸಿಇಎನ್ ಠಾಣೆ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಅಲ್ಲದೇ, ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಿಸಿದ್ದಾರೆ.
ಮದ್ಯಪ್ರಿಯರಿಗೆ ಶಾಕ್ :
ಬಜೆಟ್ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಬಿಯರ್ ದರವನ್ನು ಮತ್ತೆ ಹೆಚ್ಚಿಸುವ ನಿರ್ಧಾರ ಮಾಡಿದೆ.
ಹೌದು, ಕೆಲ ದಿನಗಳ ಹಿಂದೆಯಷ್ಟೇ ಬಿಯರ್ ಬೆಲೆ ಹೆಚ್ಚಿಸಿದ್ದ ಸರ್ಕಾರ ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಬಿಯರ್ ಸ್ಲ್ಯಾಬ್ ದರ ಪರಿಷ್ಕರಣೆ ಮಾಡಲಾಗಿದೆ. ಬಿಯರ್ ಸೇರಿ ಎಲ್ಲಾ ಬ್ರ್ಯಾಂಡ್ ಗಳ ಬೆಲೆ ಹೆಚ್ಚಳ ಮಾಡಲಾಗಿದೆ. ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IMl ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡಲಾಗಿದೆ.
ಕೆಫೆ ಸಂಜೀವಿನಿ :
7.50 ಕೋಟಿ ರೂ. ವೆಚ್ಚದಲ್ಲಿ ಕೆಫೆ ಸಂಜೀವಿನಿ ಹೆಸರಿನ 50 ಮಹಿಳಾ ಕೆಫೆಗಳನ್ನು ಈ ವರ್ಷದಲ್ಲಿ ರಾಜ್ಯಾದ್ಯಂತ ಪ್ರಾರಂಭಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ಆಶಾದೀಪ ಯೋಜನೆ :
ಪ್ರಸಕ್ತ ಆಶಾದೀಪ ಯೋಜನೆಯಡಿ ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಸೌಲಭ್ಯವನ್ನು ವಿಸ್ತರಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು