Connect with us

Hi, what are you looking for?

Diksoochi News

ರಾಷ್ಟ್ರೀಯ

ಖ್ಯಾತ ಕವಿ ಗುಲ್ಜಾರ್, ಸಂಸ್ಕೃತ ವಿದ್ವಾಂಸ ರಾಮಭದ್ರಾಚಾರ್ಯರಿಗೆ ಜ್ಞಾನಪೀಠ ಪ್ರಶಸ್ತಿ

0

ನವದೆಹಲಿ: ಖ್ಯಾತ ಉರ್ದು ಕವಿ ಗುಲ್ಜಾರ್ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಜ್ಞಾನಪೀಠ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ.

ಗುಲ್ಜಾರ್ ಅವರು ಹಿಂದಿ ಚಿತ್ರರಂಗದಲ್ಲಿ ಸಿನಿಮಾ ಸಾಹಿತಿಯಾಗಿ ಗುರುತಿಸಿಕೊಂಡಿದ್ದಾರೆ. ಅತ್ಯುತ್ತಮ ಉರ್ದು ಕವಿಗಳಲ್ಲಿ ಒಬ್ಬರು.

ಗುಲ್ಜಾರ್ ಅವರು ಈ ಹಿಂದೆ 2002ರಲ್ಲಿ ಉರ್ದುಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2013 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 2004 ರಲ್ಲಿ ಪದ್ಮಭೂಷಣ ಮತ್ತು ಅವರ ಕೃತಿಗಳಿಗಾಗಿ ಕನಿಷ್ಠ ಐದು ರಾಷ್ಟ್ರೀ ಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.

Advertisement. Scroll to continue reading.

ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕ ಹಾಗೂ ಮುಖ್ಯಸ್ಥರಾದ ರಾಮಭದ್ರಾಚಾರ್ಯರು ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹೆಸರಾಂತ ಹಿಂದೂ ಆಧ್ಯಾತ್ಮಿಕ ನಾಯಕ, ಶಿಕ್ಷಣತಜ್ಞ ಮತ್ತು 100ಕ್ಕೂ ಹೆಚ್ಚು ಪುಸ್ತಕಗಳನ್ನು ರಾಮಭದ್ರಾಚಾರ್ಯ ಬರೆದಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!