Connect with us

Hi, what are you looking for?

Diksoochi News

ಕ್ರೀಡೆ

IND vs ENG TEST: ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಆತಿಥೇಯರು

0

ರಾಂಚಿ : ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಅಂತ್ಯವಾಗಿದ್ದು, ಭಾರತ 7 ವಿಕೆಟ್ ನಷ್ಟಕ್ಕೆ 219ರನ್ ಗಳಿಸಿ 134 ರನ್ ಗಳ ಹಿನ್ನಡೆ ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 353 ರನ್ ಗಳಿಗೆ ಆಲೌಟ್ ಆಗಿತ್ತು. ಈ ಗುರಿ ಬೆನ್ನು ಹತ್ತಿದ ಭಾರತ ಬ್ಯಾಟಿಂಗ್ ವೈಫಲ್ಯ ಕಂಡಿತು.

ಭಾರತದ ಪರ ಆರಂಭಿಕ ಆಟಗಾರ ಜೈಸ್ವಾಲ್ (73 ರನ್), ಶುಭ್ ಮನ್ ಗಿಲ್ (38ರನ್) ಗಳಿಸಿ ಆಸರೆಯಾದರು. ಆದರೆ ನಾಯಕ ರೋಹಿತ್ ಶರ್ಮಾ 2ರನ್ ಗಳಿಸಿ ಔಟಾಗಿ ನಿರಾಶೆ ಮೂಡಿಸಿದರು. ರಜತ್ ಪಾಟಿದಾರ್ 17ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, 12 ರನ್ ಗಳಿಸಿದ್ದ ರವೀಂದ್ರ ಜಡೇಜಾ ಕೂಡ ಪೆವಿಲಿಯನ್ ಸೇರಿದರು.

ದಿನದಂತ್ಯಕ್ಕೆ ಭಾರತ 7 ವಿಕೆಟ್ ನಷ್ಟಕ್ಕೆ 219ರನ್ ಗಳಿಸಿದ್ದು, ಇನ್ನೂ 134 ರನ್ ಗಳ ಹಿನ್ನಡೆಯಲ್ಲಿದೆ. ಹೀಗಾಗಿ ನಾಳೆ ಧ್ರುವ್ ಜುರೆಲ್ ಮತ್ತು ಕುಲದೀಪ್ ಯಾದವ್ ಬ್ಯಾಟಿಂಗ್ ಭಾರತ ತಂಡಕ್ಕೆ ಪ್ರಮುಖವಾಗಲಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!