ಶಿವಮೊಗ್ಗ : ಸಾಗರ ತಾಲೂಕಿನ ಆನಂದಪುರದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರ ಪುತ್ರರೊಬ್ಬರು, ಇಂದು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಸಾಗರ ತಾಲೂಕಿನ ಆನಂದಪುರದಲ್ಲಿನ ಬಸವನ ಬೀದಿಯಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಗೋಪಾಲ್ ಅವರ ಮಗ ಶರತ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಆನಂದಪುರದ ತಾವರೆಹಳ್ಳಿ ಬಳಿಯಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಗೋಪಾಲ್ ಅವರ ತೋಟದ ಮನೆಯಿದೆ. ಅಲ್ಲಿಗೆ ತೆರಳಿರುವಂತ ಅವರ ಪುತ್ರ ಶರತ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
Advertisement. Scroll to continue reading.

ಶರತ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.
ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
Advertisement. Scroll to continue reading.
