Connect with us

Hi, what are you looking for?

Diksoochi News

ಕ್ರೀಡೆ

IND vs ENG Test : ಇಂಗ್ಲೆಂಡ್ ವಿರುದ್ಧ ಭಾರತ ಮೇಲುಗೈ

0

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. ಇಂಗ್ಲೆಂಡ್ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 145 ರನ್‌ಗಳಿಗೆ ಆಲೌಟ್ ಆಗಿದೆ. ಮೂರನೇ ದಿನದಾಟದ ಅಂತ್ಯಕ್ಕೆ ಭಾರತ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದ್ದು, ಗೆಲುವಿಗೆ 145 ರನ್ ಬೇಕಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 307 ರನ್‌ಗಳಿಗೆ ಆಲೌಟ್ ಆಗುವ ಮೂಲಕ 46 ರನ್‌ಗಳ ಹಿನ್ನಡೆ ಅನುಭವಿಸಿತು. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಸ್ಪಿನ್‌ ದಾಳಿಗೆ ಕಂಗಾಲಾದ ಇಂಗ್ಲೆಂಡ್ 145 ರನ್‌ಗಳಿಗೆ ಆಲೌಟ್ ಆಯಿತು. 

ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಕಡಿಮೆ ಮೊತ್ತಕ್ಕೆ ಆಲೌಟ್ ಆಗುವ ಭೀತಿಯಲ್ಲಿದ್ದಾಗ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ 90 ರನ್ ಗಳಿಸಿ ನೆರವಾದರು. ಮೊದಲ ಇನ್ನಿಂಗ್ಸ್‌ ಹಿನ್ನಡೆಯನ್ನು 46 ರನ್‌ಗಳಿಗೆ ಇಳಿಸಿದರು.

131 ಎಸೆತಗಳಲ್ಲಿ 28 ರನ್ ಗಳಿಸಿ ಜುರೆಲ್ ಅವರಿಗೆ ಸಾಥ್ ನೀಡಿದರು.

Advertisement. Scroll to continue reading.

ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಗೆಲುವಿಗೆ 192 ರನ್‌ ಬೇಕಿದ್ದು ಮೂರನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ರೋಹಿತ್ ಶರ್ಮಾ ಅಜೇಯ 24 ರನ್ ಗಳಿಸಿದ್ದು, ನಾಲ್ಕನೇ ದಿನ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇವರಿಗೆ ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 16 ರನ್ ಗಳಿಸಿರುವ ಜೈಸ್ವಾಲ್ ಸಾಥ್ ನೀಡಲಿದ್ದಾರೆ.

ಇನ್ನು ಭಾರತ ಪರ ಕುಲದೀಪ್ ಯಾದವ್ 4 ವಿಕೆಟ್, ಅಶ್ವಿನ್ ಎರಡನೇ ಇನ್ನಿಂಗ್ಸ್‌ನಲ್ಲಿ ಮಾರಕ ಬೌಲಿಂಗ್ ನಡೆಸಿ 5 ವಿಕೆಟ್ ಪಡೆದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!