Connect with us

Hi, what are you looking for?

Diksoochi News

ಕ್ರೀಡೆ

IND vs ENG: ರಾಂಚಿ ಟೆಸ್ಟ್‌ನಲ್ಲಿ ಭಾರತಕ್ಕೆ ಜಯ: ಸರಣಿ ಕೈ ವಶ

1

ರಾಂಚಿ: ಒತ್ತಡಕ್ಕೆ ಸಿಲುಕಿದರೂ ಪುಟಿದೆದ್ದು ಪ್ರವಾಸಿ ಇಂಗ್ಲೆಂಡ್ ಪಡೆಗೆ ತಿರುಗೇಟು ನೀಡಿದ ಟೀಮ್ ಇಂಡಿಯಾ ರಾಂಚಿ ಟೆಸ್ಟ್‌ ಪಂದ್ಯವನ್ನು 5 ವಿಕೆಟ್‌ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಐದು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಇನ್ನೊಂದು ಪಂದ್ಯ ಬಾಕಿ ಇರುವಾಗಲೇ 3-1 ಅಂತರದಲ್ಲಿ ಟ್ರೋಫಿ ಗೆಲುವನ್ನು ಖಾತ್ರಿ ಪಡಿಸಿಕೊಂಡಿದೆ.

ಪಂದ್ಯ ಗೆಲುವಿಗೆ 192 ರನ್‌ಗಳ ಗುರಿ ಪಡೆದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್‌ಗೆ 84 ರನ್ ಪೇರಿಸಿದರು. ಯಶಸ್ವಿ ಜೈಸ್ವಾಲ್ (37) ಹಾಗೂ ರೋಹಿತ್ ಶರ್ಮಾ (55) ಔಟಾಗುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿತು.

Advertisement. Scroll to continue reading.

120 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ಶುಭ್ಮನ್ ಗಿಲ್  ಹಾಗೂ ಧ್ರುವ್ ಜುರೇಲ್ ಆಸರೆಯಾದರು. 6ನೇ ವಿಕೆಟ್‌ಗೆ 72 ರನ್‌ಗಳ ಜೊತೆಯಾಟವಾಡುವ ಮೂಲಕ ಗಿಲ್ (52) – ಧ್ರುವ್ (39) ಜೋಡಿ ಟೀಮ್ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ಭಾರತ ತಂಡವು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದೆ.

ಮೊದಲ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪರ ಜೋ ರೂಟ್ (122) ಅಜೇಯ ಶತಕ ಬಾರಿಸಿದ್ದರು. ಈ ಸೆಂಚುರಿ ನೆರವಿನಿಂದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ ನಲ್ಲಿ 353 ರನ್ ಕಲೆಹಾಕಿತು. ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ ಮೊದಲ ಇನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದು ಮಿಂಚಿದ್ದರು.

ಮೊದಲ ಇನಿಂಗ್ಸ್ ಆರಂಭಿಸಿದ ಭಾರತ ತಂಡದ ಪರ ಯುವ ವಿಕೆಟ್ ಕೀಪರ್ ಧ್ರುವ್ ಜುರೇಲ್ (90) ಹಾಗೂ ಯಶಸ್ವಿ ಜೈಸ್ವಾಲ್ (73) ಅರ್ಧಶತಕ ಬಾರಿಸಿ ಮಿಂಚಿದರು. ಈ ಅರ್ಧಶತಕಗಳ ಹೊರತಾಗಿಯೂ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ 307 ರನ್‌ಗೆ ಆಲೌಟ್ ಆಗಿ 46 ರನ್‌ಗಳ ಹಿನ್ನಡೆ ಅನುಭವಿಸಿತು. ಈ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ ಪರ ಶೊಯೆಬ್ ಬಶೀರ್ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

46 ರನ್‌ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ರವಿಚಂದ್ರನ್ ಅಶ್ವಿನ್ ಹಾಗೂ ಕುಲ್ದೀಪ್ ಯಾದವ್ ಅವರ ಸ್ಪಿನ್ ದಾಳಿಗೆ ತತ್ತರಿಸಿತು. ಪರಿಣಾಮ ಇಂಗ್ಲೆಂಡ್ ಕೇವಲ 145 ರನ್‌ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಅಶ್ವಿನ್ 5 ವಿಕೆಟ್ ಕಬಳಿಸಿದರೆ, ಕುಲ್ದೀಪ್ 4 ವಿಕೆಟ್ ಪಡೆದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!