ಶಿವಮೊಗ್ಗ : ಸೊರಬ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಶಿವಪುರ ಗ್ರಾಮದ ಮಾವಲಿ ಬಳಿ ನಡೆದಿದೆ.
ಲೋಹಿತ್ ಫಕೀರಪ್ಪ, ಶ್ರೀನಿವಾಸ ಮಾರುತಿ ಮೃತ ವ್ಯಕ್ತಿಗಳು.
ಶಿರಾಳಕೊಪ್ಪದ ಕಡೆಯಿಂದ ಸೊರಬ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿ, ಶಿರಾಳಕೊಪ್ಪದ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.
Advertisement. Scroll to continue reading.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ಒಂದೊಂದು ಕಡೆ ಬಿದ್ದಿದ್ದಾರೆ. ತಲೆಗೆ ಗಂಭೀರ ಗಾಯಗೊಂಡು ಇಬ್ಬರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಶಿರಾಳಕೊಪ್ಪ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯರ ಸಹಾಯದ ಮೇರೆಗೆ ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, mavani, Shivamogga, soraba

Click to comment