ಬೆಂಗಳೂರು: ರಾಜ್ಯದಲ್ಲಿ ಜನಸಾಮಾನ್ಯರು, ಕೈಗಾರಿಕೆಗಳು ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಅನ್ವಯವಾಗುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ವತಿಯಿಂದ ಪ್ರತಿ ಯೂನಿಟ್‌ಗೆ 1ರೂ. 10 ಪೈಸೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಆದರೆ, ಒಂದು ಷರತ್ತು ವಿಧಿಸಲಾಗಿದ್ದು, ಈ ವಿದ್ಯುತ್ ದರ ಇಳಿಕೆ 100 ಯೂನಿಟ್‌ಗಿಂತ ಹೆಚ್ಚು ಬಳಕೆ ಮಾಡುವ ಗ್ರಾಹಕರಿಗೆ ಮಾತ್ರ ಅನ್ವಯ ಆಗುತ್ತದೆ.
100 ಯೂನಿಟ್ ಗಿಂತಲೂ ಹೆಚ್ಚು ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ ಮೇಲೆ, 1 ರೂ. 25 ಪೈಸೆಯಷ್ಟು ಕಡಿಮೆ ಮಾಡಲಾಗಿದೆ. ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ವಿಧಿಸಲಾಗುವ ವಿದ್ಯುತ್ ಮೇಲೆ ಪ್ರತಿ ಯೂನಿಟ್ ಗೆ 40 ಪೈಸೆ ಕಡಿಮೆ ಮಾಡಲಾಗಿದ್ದು, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. 100 ಯೂನಿಟ್ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್ 1ರಿಂದಲೇ ಅನ್ವಯವಾಗುತ್ತದೆ.
Advertisement. Scroll to continue reading.
In this article:current, Featured, gruha Jyothi, Karnataka government, power, ಗೃಹ ಜ್ಯೋತಿ, ವಿದ್ಯುತ್ ದರ ಇಳಿಕೆ
Click to comment