Connect with us

Hi, what are you looking for?

Diksoochi News

ಸಿನಿಮಾ

ನಟ, ರಾಜಕಾರಣಿ, ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ನಿಧನ

1

ನಟ, ರಾಜಕಾರಣಿ, ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಕಾರ್ಡಿಯಕ್ ಅರೆಸ್ಟ್ ಹಾಗೂ ಇತರ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು, ಇಂದು ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.

ಕಳೆದ 20 ದಿನಗಳಿಂದ ಶಿವರಾಮ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಿನದಿಂದ ದಿನಕ್ಕೆ ಅವರ ಆರೋಗ್ಯದ ಸ್ಥಿತಿ ಚಿಂತಾಜನಕವಾಗಿತ್ತು.

ಕನ್ನಡದಲ್ಲಿ ಐಎಎಸ್ ಪರೀಕ್ಷೆ….ಬಣ್ಣದ ಬದುಕಿನತ್ತ :

Advertisement. Scroll to continue reading.

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಂ, 1985ರಲ್ಲಿ ಕೆಎಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಕನ್ನಡದಲ್ಲೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಕೀರ್ತಿ ಶಿವರಾಂ ಅವರಿಗೆ ಸಲ್ಲಿತ್ತು. ಕೆ.ಶಿವರಾಮ್ ಅವರಿಗೆ ಸಿನಿಮಾ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿತ್ತು.

ಬಾನಲ್ಲೆ ಮಧುಚಂದ್ರಕ್ಕೆ’, ‘ವಸಂತಕಾವ್ಯ’ ಚಿತ್ರದಲ್ಲಿ ನಾಯಕನಾಗಿ ಜನಪ್ರಿಯರಾಗಿದ್ದರು.

ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಸಿನಿಮಾಗಳಲ್ಲಿ ನಟಿಸಿದ್ದರು.

ರಾಜಕೀಯದತ್ತ :

Advertisement. Scroll to continue reading.

2013ರಲ್ಲಿ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದ ಅವರು ಕಾಂಗ್ರೆಸ್ ಸೇರಿದರು ಶಿವರಾಂ 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋಲುಂಡಿದ್ದರು. ಬಳಿಕ, ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರಿದ್ದರು. ಅಲ್ಲದೆ, ಛಲವಾದಿ ಮಹಸಭಾ ಅಧ್ಯಕ್ಷರೂ ಆಗಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!