Connect with us

Hi, what are you looking for?

Diksoochi News

ರಾಷ್ಟ್ರೀಯ

ಭಾರತ ಜಿಡಿಪಿ ನಿರೀಕ್ಷೆಗೂ ಮೀರಿ ವೃದ್ಧಿ

0

ನವದೆಹಲಿ: ಅಕ್ಟೋಬರ್‌- ಡಿಸೆಂಬರ್‌ ಅವಧಿಯ ಮೂರನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ ನಿರೀಕ್ಷೆಗೂ ಮೀರಿ ವೃದ್ಧಿಯಾಗಿದೆ. ಈ ಅವಧಿಯಲ್ಲಿ ಹಲವು ಸಂಸ್ಥೆಗಳು ಜಿಡಿಪಿ ಶೇ.6.6 ರಷ್ಟು ಪ್ರಗತಿ ಸಾಧಿಸಬಹುದು ಎಂದು ಅಂದಾಜು ಮಾಡಿದ್ದವು.  ಆದರೆ ಈ ನಿರೀಕ್ಷೆಗೂ ಮೀರಿ ಜಿಡಿಪಿ ಶೇ.8.4 ರಷ್ಟು ಪ್ರಗತಿ ಸಾಧಿಸಿದೆ.

ಕಳೆದ ಹಣಕಾಸು ವರ್ಷದ ಈ ಅವಧಿಯಲ್ಲಿ ಶೇ‌.4.3 ಜಿಡಿಪಿ ಪ್ರಗತಿ ಸಾಧಿಸಿತ್ತು. ನಿರ್ಮಾಣ ವಲಯದ (ಶೇ.10.7), ಉತ್ಪಾದನಾ ವಲಯ (ಶೇ.8.5), ಫೈನಾನ್ಸ್‌, ರಿಯಲ್‌ ಎಸ್ಟೇಟ್‌ ಇತ್ಯಾದಿ ಕ್ಷೇತ್ರ(ಶೇ.8.2) ಬೆಳವಣಿಗೆ ಸಾಧಿಸಿದೆ. ಆದರೆ ದೇಶದಲ್ಲಿ ಬರದಿಂದಾಗಿ ಕೃಷಿ ಕ್ಷೇತ್ರದಲ್ಲಿ ಮಾತ್ರ ಶೇ.0.7 ಬೆಳವಣಿಗೆಯಾಗಿರುವುದು ಕಳವಳಕ್ಕೆ ಕಾರಣವಾಗಿದೆ

2023-24ರ ಮೂರನೇ ತ್ರೈಮಾಸಿಕದಲ್ಲಿ ಸ್ಥಿರ (2011-12) ದರಗಳಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದು 2022-23 ರ ಮೂರನೇ ತ್ರೈಮಾಸಿಕದಲ್ಲಿ 40.35 ಲಕ್ಷ ಕೋಟಿ ರೂ ಆಗಿತ್ತು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!