ಮೈಸೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವುದು ಬಾಂಬ್ ಸ್ಫೋಟ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತಪಡಿಸಿದ್ದಾರೆ. ಈ ಬಗ್ಗೆ ಅವರು ಮೈಸೂರಿನಲ್ಲಿ ಮಾಹಿತಿ ನೀಡಿ ಮಾತನಾಡಿದರು.
ಭಾರೀ ಸುಧಾರಿತ ವಸ್ತುಗಳನ್ನು ಬಳಸಿ ಸ್ಫೋಟ ಮಾಡಿದ್ದಾರೆ. ಓರ್ವ ವ್ಯಕ್ತಿ ಬ್ಯಾಗ್‌ನಲ್ಲಿ ಸ್ಫೋಟಕಗಳನ್ನು ತಂದಿಟ್ಟಿದ್ದಾನೆ. ನನಗೆ ಪ್ರತಿಹಂತದ ಮಾಹಿತಿ ಕೊಡುವಂತೆ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸ್ಫೋಟಕಗಳನ್ನು ತಂದಿಟ್ಟ ವ್ಯಕ್ತಿ ಯಾರು, ಏನು ಎಂಬುದು ಇನ್ನೂ ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಪ್ರತಿ ಹಂತ ಮಾಹಿತಿಯನ್ನು ಕೊಡುವಂತೆ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಗೃಹ ಸಚಿವರಿಗೂ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದೇನೆ. 8 ಜನಕ್ಕೆ ಗಂಭೀರವಾದ ಗಾಯಗಳಾಗಿವೆ. ಸದ್ಯಕ್ಕೆ ಘಟನೆಯ ಬಗ್ಗೆ ಮೇಲ್ನೋಟದ ಮಾಹಿತಿಗಳು ಮಾತ್ರ ಲಭ್ಯವಿವೆ ಎಂದು ಹೇಳಿದರು.
ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್‌ನಲ್ಲಿ ಶುಕ್ರವಾರ ಮಧ್ಯಾಹ್ನ 1.30ಕ್ಕೆ ಸ್ಫೋಟ ಸಂಭವಿಸಿದ್ದು, 10 ಜನ ಗಾಯಗೊಂಡಿದ್ದಾರೆ.