Connect with us

Hi, what are you looking for?

Diksoochi News

ರಾಜ್ಯ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್​ಎಸ್​ಎಲ್​ ವರದಿಯಲ್ಲಿ ಬಹಿರಂಗ: ಪರಮೇಶ್ವರ್​​

1

ಬೆಂಗಳೂರು: ರಾಜ್ಯಸಭೆ ಚುನಾವಣೆ ಮುಗಿದು ಡಾ. ನಾಸಿರ್ ಹುಸೇನ್ ಅಭಿಮಾನಿಗಳು ಸಂಭ್ರಮಾಚರಣೆ ಮಾಡುವ ವೇಳೆ ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಎಫ್ಎಸ್ ಎಲ್ ವರದಿಯಲ್ಲಿ ದೃಢಪಟ್ಟಿದ್ದು, ಪ್ರಕರಣ ಸಂಬಂಧ ಮೂವರನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಎಫ್ ಎಸ್ ಎಲ್ ವರದಿ ಬರಲಿ ಎಂದು ಹೇಳುತ್ತಿದ್ದೆವು. ಎಫ್ ಎಸ್ ಎಲ್ ವರದಿ ಆಧರಿಸಿ ಕ್ರಮ ಕೈಗೊಡಿದ್ದೇವೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ದೃಢಪಟ್ಟಿದೆ. ಹೀಗಾಗಿ ಎಫ್ ಎಸ್ ಎಲ್ ವರದಿ ಆಧರಿಸಿ ಮೂವರನ್ನ ಬಂಧಿಸಲಾಗಿದೆ. ವರದಿಯಲ್ಲಿ ಯಾರು ಘೋಷಣೆ ಕೂಗಿದ್ದಾರೆಂದು ಹೇಳಿಲ್ಲ. ಯಾಕೆ ಕೂಗಿದ್ದಾರೆಂದು ಪರಿಶೀಲಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರಕ್ಕೆ ಮುಜುಗರ ಆಗುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರನ್ನು ರಕ್ಷಿಸುವುದಿಲ್ಲ, ಮುಲಾಜಿಲ್ಲದೆ ಕ್ರಮ ಕೈಗೊಂಡಿದ್ದೇವೆ. ಪೊಲೀಸ್ ಅಧಿಕಾರಿಗಳ ಲೋಪ ಇದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದರು.

Advertisement. Scroll to continue reading.

ವಿರೋಧ ಪಕ್ಷದವರು ಸುಮ್ಮನೆ ಹೇಳುತ್ತಾರೆ. ಅವರು ಹೇಳ್ತಾರೆ ಎಂದು ಅರೆಸ್ಟ್ ಮಾಡೋಕೆ ಆಗುತ್ತಾ? ನಾವು ಎಫ್ ಎಸ್ ಎಲ್ ವರದಿ ಬರಲಿ ಅಂತಾ ಕಾಯುತ್ತಿದ್ದವು. ಈಗ ಬಂದಿದೆ. ಕ್ರಮ ಕೈಗೊಂಡಿದ್ದೇವೆ ಎಂದು ಪರಮೇಶ್ವರ್ ತಿಳಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಸಿನಿಮಾ

0 ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ವಿಧಿವಶರಾಗಿದ್ದಾರೆ.  ಅವರಿಗೆ 81 ವರ್ಷ ವಯಸ್ಸಾಗಿತ್ತು. ದ್ವಾರಕೀಶ್ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಬೆಳಗಿನ ಜಾವ ಹೃದಯಾಘಾತದಿಂದ ಅವರು...

ರಾಷ್ಟ್ರೀಯ

0 ಅಯೋಧ್ಯೆ :  ಈ ಬಾರಿಯ ರಾಮನವಮಿ ಬಹಳ ವಿಶೇಷ. ಯಾಕೆಂದರೆ, ಇದೇ ಮೊದಲ ಬಾರಿಗೆ ಬಾಲರಾಮನ ಮೂರ್ತಿಯ ಹಣೆಯ ಮೇಲೆ ಸೂರ್ಯ ತಿಲಕವನ್ನು ಇಡಲಾಗುತ್ತದೆ. ಹಾಗಾಗಿ ಇಡೀ ಅಯೋಧ್ಯೆ ರಾಮನವಮಿ ಸಂಭ್ರಮ...

ಅಂತಾರಾಷ್ಟ್ರೀಯ

1 ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಅದರ ಸುತ್ತಮುತ್ತಲಿನ ದೇಶಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದೆ. ಮರುಭೂಮಿಯ ಊರಾದ ಯುಎಇಯಲ್ಲಿ ಎಲ್ಲೆಂದರಲ್ಲಿ ನೀರು ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಹಲವು ನಗರಗಳಿಗೆ...

ಸಿನಿಮಾ

0 ಮುಂಬೈ: ಸೋಷಿಯಲ್ ಮೀಡಿಯಾ ಲೋಕದಿಂದ ದುಃಖದ ಸುದ್ದಿಯೊಂದು ಬಂದಿದೆ. ಜನಪ್ರಿಯ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಿದ್ದವಾಗಿದ್ದ ಅಬ್ರದೀಪ್ ಸಹಾ ಅಲಿಯಾಸ್ ಆಂಗ್ರಿ ರಾಂಟ್‌ಮ್ಯಾನ್ 27 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಯೂಟ್ಯೂಬರ್ ಏಪ್ರಿಲ್...

ರಾಷ್ಟ್ರೀಯ

0 ಅಯೋಧ್ಯೆ: ಪ್ರಭು ಶ್ರೀರಾಮನ ಹಣೆಯ ಮೇಲೆ ವೈಭವನದ ಸೂರ್ಯತಿಲಕ ಇಡಲಾಗಿದೆ. ಈ ದೃಶ್ಯವನ್ನು ರಾಷ್ಟ್ರೀಯ ವಾಹಿನಿಯಲ್ಲಿ ಪ್ರಸಾರ ಮಾಡಲಾಗಿದೆ. ರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ ಆಕರ್ಷಕವಾಗಿ ಕಂಡಿದೆ. ಇದೇ...

error: Content is protected !!